ಗೆಳೆಯರಿಂದಲೇ ನಡೆಯಿತು ಯುವಕನ ಕೊಲೆ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೃತ್ಯ

Spread the love

ಗೆಳೆಯರಿಂದಲೇ ನಡೆಯಿತು ಯುವಕನ ಕೊಲೆ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೃತ್ಯ

ಕುಂದಾಪುರ: ಮನೆಯಿಂದ ನಾಪತ್ತೆಯಾದ ಯುವಕನೋರ್ವ ವಾರಗಳ ಬಳಿಕ ನದಿಯಲ್ಲಿ ನಿಗೂಢವಾಗಿ ಕೊಳೆತ ಸ್ಥಿತಿಯಲ್ಲಿ ಮೃತದೇಹವಾಗಿ ಪತ್ತೆಯಾದ ಅಸಹಜ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುವುದು ಪಡೆದುಕೊಂಡಿದ್ದು, ಪೊಲೀಸರು ಕೊಲೆ ಕೃತ್ಯದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿನಯ ಪೂಜಾರಿ

ಕುಂದಾಪುರ ತಾಲೂಕಿನ ಹಂಗಳೂರು ಗ್ರಾಮದ ಚೌಕುಡಿಬೆಟ್ಟು ನಿವಾಸಿಯಾದ ವಿನಯ ಪೂಜಾರಿ (26) ಕೊಲೆಯಾದವನು. ಈ ಪ್ರಕರಣದಲ್ಲಿ ಆರೋಪಿಗಳಾದ ಕುಂದಾಪುರ ಹಂಗಳೂರು ಹೊಸತೊಪ್ಲು ನಿವಾಸಿ ಅಕ್ಷಯ (28) ಬಸ್ರೂರು ಗುಂಡಿಗೋಳಿ ನಿವಾಸಿಗಳಾದ ಪ್ರವೀಣ್ ಪೂಜಾರಿ ಹಾಗೂ ಸತೀಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆ ವಿವರ:

ವಿನಯ ಪೂಜಾರಿ ಮಾರ್ಚ್ 28 ರಂದು ಮನೆಯಿಂದ ಕಾಣೆಯಾಗಿದ ಬಗ್ಗೆ ಕುಂದಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಏ.4 ರಂದು ಬೆಳಿಗ್ಗೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಹಡಾಳಿ ಎಂಬಲ್ಲಿ ವಾರಾಹಿ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ವಿನಯ ಪೂಜಾರಿಯ ಮೃತದೇಹ ಎಂಬ ಬಗ್ಗೆ ಆತನ ಚಹರೆಯಲ್ಲಿ ಗುರುತಿಸಲಾಗಿತ್ತು. ಈ ಸಾವಿನ ಬಗ್ಗೆ ವಿನಯ್ ಮಾವ ಶೀನ ಪೂಜಾರಿ ಸಂಶಯ ಇರುವುದಾಗಿ ಏ.4ರಂದು ದೂರು ನೀಡಿದ್ದು ಶಂಕರನಾರಾಯಣ ಪೆÇಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣದ ಅಡಿ ಪ್ರಕರಣ ದಾಖಲಾಗಿತ್ತು. ಮೃತದೇಹವನ್ನು ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ವೈದ್ಯಕೀಯ ಮರಣೋತ್ತರ ಪರೀಕ್ಷೆ ನಡೆಸಿದ್ದು ಸೆ. 6 ರಂದು ವೈದ್ಯಕೀಯ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸರ ಕೈಸೇರಿತ್ತು. ಅದರಲ್ಲಿ ವಿನಯ ಪೂಜಾರಿಯವರನ್ನು ಕುತ್ತಿಗೆಯ ಭಾಗಕ್ಕೆ ಬಲವಾಗಿ ಒತ್ತಿದ್ದರಿಂದ ಸಾವು ಸಂಭವಿಸಿರುವುದಾಗಿ ವರದಿ ಬಂದಿತ್ತು. ಈ ವರದಿಯ ಸ್ವೀಕರಿಸಿದ ಬಳಿಕ ವಿನಯ ಪೂಜಾರಿಯ ಸಹೋದರಿ ವಿನಯ್ ಸಾವಿನಲ್ಲಿ ಅಕ್ಷಯ ಹಾಗೂ ಅವರ ಸ್ನೇಹಿತರ ಕೈವಾಡವಿದ್ದು ಇದೊಂದು ಕೊಲೆಯೆಂದು ದೂರು ನೀಡಿದ ಬಗ್ಗೆ ಶಂಕರನಾರಾಯಣ ಪೆÇಲೀಸ್ ಠಾಣೆಯಲ್ಲಿ ಐಪಿಸಿ ಕಲಂ 302, 201, 34 ರಂತೆ ಪ್ರಕರಣ ದಾಖಲಾಗಿತ್ತು.

ಉಡುಪಿ ಜಿಲ್ಲಾ ಪೆÇಲೀಸ್ ಅಧೀಕ್ಷಕ ಅಕ್ಷಯ ಎಂ. ಹೆಚ್ ನಿರ್ದೇಶನದಲ್ಲಿ, ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ಎಸ್.ಟಿ.ಸಿದ್ದಲಿಂಗಪ್ಪ ಮಾರ್ಗದರ್ಶನದಲ್ಲಿ ಕುಂದಾಪುರ ಪೆÇಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ಹಾಗೂ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್ ನೇತೃತ್ವದಲ್ಲಿ, ಶಂಕರನಾರಾಯಣ ಪೆÇಲೀಸ್ ಠಾಣಾ ಉಪನಿರೀಕಕ್ಷಕ ಶ್ರೀಧರ್ ನಾಯ್ಕ್, ಕುಂದಾಪುರ ಪೆÇಲೀಸ್ ಉಪಾಧೀಕ್ಷರ (ಡಿವೈಎಸ್ಪಿ) ಅಪರಾಧ ಪತ್ತೆ ದಳದ ಸಿಬ್ಬಂದಿಗಳಾದ ರಾಮು ಹೆಗ್ಡೆ, ರಾಘವೇಂದ್ರ ದೇವಾಡಿಗ, ಕುಂದಾಪುರ ಪೆÇಲೀಸ್ ಠಾಣೆ ಸಿಬ್ಬಂದಿಗಳಾಸ ಸಂತೋಷ ಕುಮಾರ್, ಸಂತೋಷ ಕೆ.ಯು ಹಾಗೂ ಶಂಕರನಾರಾಯಣ ಪೆÇಲೀಸ್ ಠಾಣಾ ಸಿಬ್ಬಂದಿಗಳಾಸ ಗೋಪಾಲ ಕೃಷ್ಣ, ಮಂಜುನಾಥ, ರಾಘವೇಂದ್ರ, ಪುನೀತ್ ಕುಮಾರ ಶೆಟ್ಟಿ, ಆಲಿಂಗರಾಯ ಕಾಟೆ, ಜಯರಾಮ, ಸತೀಶ, ಚಂದ್ರ ಕುಮಾರ್ ಕುಂದಾಪುರ ಗ್ರಾಮಾಂತರ ಠಾಣೆಯ ಮಧುಸೂದನ್, ಅನಿಲ್ ಕುಮಾರ್ ತಂಡ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love

Leave a Reply

Please enter your comment!
Please enter your name here