ಗೆಳೆಯರಿಂದ ಮೋಸ- ವ್ಯಕ್ತಿ ಆತ್ಮಹತ್ಯೆ

Spread the love

ಗೆಳೆಯರಿಂದ ಮೋಸ- ವ್ಯಕ್ತಿ ಆತ್ಮಹತ್ಯೆ

ಮಂಗಳೂರು : ಗೆಳೆಯರಿಂದ ಮೋಸ ಹೋದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ವಾಮಂಜೂರು ನಿವಾಸಿ ಆಸ್ಟಿನ್ ಸೈಮನ್ ನೊರೊನ್ಹಾ (54) ಎಂದು ಗುರುತಿಸಲಾಗಿದೆ.

ಮಾಹಿತಿಗಳ ಪ್ರಕಾರ ಆಸ್ಟಿನ್ ಹಣದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು 25 ವರ್ಷಗಳ ಕಾಲ ವಿದೇಶದಲ್ಲಿ ಕೆಲಸ ಮಾಡಿಕಕೊಂಡಿದ್ದು ಒಂದು ವರ್ಷದ ಹಿಂದೆಯಷ್ಟೇ ಊರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಫೇಸ್ ಬುಕ್ ಎಕೌಂಟಿನಲ್ಲಿ ಈ ಕುರಿತು ಬರೆದುಕೊಂಡಿದ್ದರು ಎನ್ನಲಾಗಿದೆ.

ಬುಧವಾರ ಮಧ್ಯಾಹ್ನ 1.30 ರ ಹೊತ್ತಿಗೆ ತನ್ನ ಮನೆಯಲ್ಲಿನ ಸಿಲೀಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳೂರು ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಕೆಳಗಿಳಿಸಿದ್ದಾರೆ.
ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love