ಗೊತ್ತು ಗುರಿಯಿಲ್ಲದ ಬಜೆಟ್ , ಕರ್ನಾಟಕವನ್ನು ಕಡೆಗಣಿಸಿದ ಕೇಂದ್ರ – ಅಶೋಕ್ ಕುಮಾರ್ ಕೊಡವೂರು

Spread the love

ಗೊತ್ತು ಗುರಿಯಿಲ್ಲದ ಬಜೆಟ್ , ಕರ್ನಾಟಕವನ್ನು ಕಡೆಗಣಿಸಿದ ಕೇಂದ್ರ – ಅಶೋಕ್ ಕುಮಾರ್ ಕೊಡವೂರು

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಸೋಮವಾರ ಮಂಡಿಸಿದ ಬಜೆಟ್ ಸಂಪೂರ್ಣ ಗೊತ್ತು ಗುರಿಯಿಲ್ಲದ ಬಜೆಟ್ ಆಗಿದ್ದು, ಕರ್ನಾಟಕವನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.

ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿಲ್ಲ. ಸರಕಾರಿ ಸೌಮ್ಯದ ಸಂಸ್ಥೆಗಳಿಂದ ಬಂಡವಾಳ ಹಿಂತೆಗೆತದೊಂದಿಗೆ ಖಾಸಗೀಕರಣಕ್ಕೆ ಒತ್ತು. ಸಣ್ಣ ಉದ್ಯಮ ಪುನಶ್ಚೇತನ ಮಾಡುವಲ್ಲಿ ಯಾವುದೇ ಕಾರ್ಯಕ್ರಮವಿಲ್ಲದೆ ವಿಫಲ. ರೈತರಿಗೆ ಯಾವುದೇ ಹೊಸ ಯೋಜನೆಗಳಿಲ್ಲ. ಕರ್ನಾಟಕವನ್ನು ಕಡೆಗಣಿಸಿ ಚುನಾವಣೆ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಉತ್ಪಾದನಾ ಕ್ಷೇತ್ರಕ್ಕೆ ಯಾವುದೇ ಒತ್ತು ನೀಡದೆ ನಿರುದ್ಯೋಗ ಸಮಸ್ಯೆ ಇನ್ನೂ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ಗಳಿಗೆ ಕೃಷಿ ಸೆಸ್ ಹೇರಿಕೆಯ ಮೂಲಕ ಜನ ಸಾಮಾನ್ಯರಿಗೆ ಇನ್ನೂ ಬೆಲೆ ಏರಿಕೆಯ ಹೊರೆ. ಕೋವಿಡ್-19 ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಬಜೆಟ್ನಲ್ಲಿ ಯಾವುದೇ ಯೋಜನೆ ಹಾಕಿಕೊಂಡಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.


Spread the love