ಗ್ಯಾರಂಟಿ ಯೋಜನೆ ಜಾರಿ – ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ತಲೆ ಬೋಳಿಸಲು ಬ್ಲೇಡ್ ಕಳುಹಿಸಿದ ಕೊಪ್ಪ ಕಾಂಗ್ರೆಸ್

Spread the love

ಗ್ಯಾರಂಟಿ ಯೋಜನೆ ಜಾರಿ – ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ತಲೆ ಬೋಳಿಸಲು ಬ್ಲೇಡ್ ಕಳುಹಿಸಿದ ಕೊಪ್ಪ ಕಾಂಗ್ರೆಸ್

ಕೊಪ್ಪ: ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 9 ತಿಂಗಳ ಒಳಗೆ ಸಂಪೂರ್ಣ ಜಾರಿಗೊಳಿಸಿದೆ.

ಚುನಾವಣಾ ಸಂದರ್ಭದಲ್ಲಿ ಬಿಜೆಪಿ ರಾಜ್ಯಾದ್ಯಕ್ಷರು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಮತ್ತು ಅವರ ಪಟಾಲಂ ಗ್ಯಾರಂಟಿ ಯೋಜನೆಗಳು ಸುಳ್ಳು ಭರವಸೆ ಅವು ಜಾರಿಮಾಡುವುದಿಲ್ಲ ಹಾಗೇನಾದರೂ ಜಾರಿಯಾದರೆ ನಾವು ತಲೆ ಬೋಳಿಸಿಕೊಳ್ಳುತ್ತೇವೆ ಎಂದು ಹೇಳಿಕೆಗಳನ್ನು ನೀಡಿದ್ದರು.

ನಾವು ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನು ಜಾರಿಮಾಡಿದ್ದೇವೆ ನೀವು ಹೇಳಿದಂತೆ ನಡೆದುಕೊಳ್ಳಿ ಎನ್ನುವ ಒತ್ತಾಯವನ್ನು ಮಾಡುತ್ತಾಇಂದು ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಕುಮಾರ್ ಮುರೊಳ್ಳಿಯವರ ಕಛೇರಿಯಲ್ಲಿ ತಲೆಬೋಳಿಸಿಕೊಳ್ಳುವ ಸಲಕರಣೆಗಳನ್ನು (ಬ್ಲೇಡ್) ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ.ರಾಜೇಗೌಡರ ನೇತೃತ್ವದಲ್ಲಿ ಅಂಚೆ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.


Spread the love