ಗ್ಯಾಸ್ ಗೀಸರ್ ನಿಂದ ವಿಷ ಅನಿಲ ಸೋರಿಕೆ : ಇಬ್ಬರ ಮೃತ್ಯು

Spread the love

ಗ್ಯಾಸ್ ಗೀಸರ್ ನಿಂದ ವಿಷ ಅನಿಲ ಸೋರಿಕೆ : ಇಬ್ಬರ ಮೃತ್ಯು

ಬೆಂಗಳೂರು: ಗ್ಯಾಸ್ ಗೀಸರ್ನಿಂದ ವಿಷ ಅನಿಲ ಸೋರಿಕೆ ಆಗಿ ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಆಗಲು ಸಿದ್ದರಾಗಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಚಂದ್ರಶೇಖರ್, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಿವಾಸಿ ಸುಧಾರಾಣಿ ಎಂದು ಗುರುತಿಸಲಾಗಿದೆ.

ಇಬ್ಬರಿಗೂ ಮದುವೆ ನಿಶ್ಚಯವಾಗಿತ್ತು, ಹೀಗಾಗಿ ಇಬ್ಬರೂ ಜೊತೆಯಲ್ಲಿ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ. ಈ ನಡುವೆ ಭಾನುವಾರ ಇಬ್ಬರು ಜೊತೆಯಾಗಿ ಸಾನ ಮಾಡಲು ಬಾತ್ರೂಮ್ಗೆ ತೆರಳಿದ್ದ ವೇಳೆಯಲ್ಲಿ, ಕಾರ್ಬನ್ ಮೊನಾಕ್ಸೆಡ್ ಸೋರಿಕೆಯಾಗಿ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಜೋಡಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಗ್ಯಾಸ್ ಗೀಸರ್ನಿಂದ ವಿಷ ಅನಿಲ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹಗಳನ್ನು ಪೊಲೀಸರು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love