ಗ್ರಾಪಂ ಚುನಾವಣೆ ; ಮತಗಟ್ಟೆಗಳಿಗೆ ಭೇಟಿ ನೀಡಿದ ಡಿಸಿ ಜಗದೀಶ್, ಎಸ್ಪಿ ವಿಷ್ಣುವರ್ಧನ್

Spread the love

ಗ್ರಾಪಂ ಚುನಾವಣೆ ; ಮತಗಟ್ಟೆಗಳಿಗೆ ಭೇಟಿ ನೀಡಿದ ಡಿಸಿ ಜಗದೀಶ್, ಎಸ್ಪಿ ವಿಷ್ಣುವರ್ಧನ್

ಉಡುಪಿ: ಜಿಲ್ಲೆಯಲ್ಲಿ ಮೊದಲ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದ್ದು ಜಿಲ್ಲಾಧಿಕಾರಿ ಜಿ ಜಗದೀಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಹಿರಿಯಡ್ಕದಲ್ಲಿವರುವ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ನ ಕರ್ನಾಟಕ ಪಬ್ಲಿಕ್ ಸ್ಕೂಲ್ ಗ್ರಾ ಪಂಚಾಯತ್ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆಯನ್ನು ಅವಲೋಕಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಜಿಲ್ಲೆಯ ನಾಲ್ಕು ತಾಲೂಕುಗಳ 66 ಗ್ರಾಮ ಪಂಚಾಯತ್ ಗಳಲ್ಲಿ ಶಾಂತಿಯುತ ಮತದಾನ ನಡೆಯುತ್ತಿದ್ದು ಎಲ್ಲೂ ಕೂಡ ಯಾವುದೇ ಸಮಸ್ಯೆ ಕಂಡುಬಂದಿಲ್ಲ.

ಕೋವಿಡ್ ಕೂಡ ಮತದಾನಕ್ಕೆ ಯಾವುದೇ ಅಡ್ಡಿಯಾಗಿಲ್ಲ. ಜಿಲ್ಲೆಯ ಎಲ್ಲಾ ಮತದಾನ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಉತ್ಸಾಹದಿಂದ ಮತ ಚಲಾವಣೆ ಮಾಡುತ್ತಿದ್ದಾರೆ ಎಂದರು.


Spread the love