
Spread the love
ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರು ಪೊರೈಕೆಗೆ ಕ್ರಮ – ಶಾಸಕ ಯಶ್ಪಾಲ್ ಸುವರ್ಣ
ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮ ಪಂಚಾಯತ್ ಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ರವರಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ ಚರ್ಚಿಸಿದರು.
ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗುವಂತೆ ನಿರ್ದೇಶನ ನೀಡುವಂತೆ ಹೇಳಿದರು.
ಈ ಬಗ್ಗೆ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಕೂಡಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿ ಕುಡಿಯುವ ನೀರಿನ ಪೂರೈಕೆಗೆ ವ್ಯವಸ್ಥೆ ಮಾಡುವಂತೆಯೂ ತಿಳಿಸಿದರು.
Spread the love