ಗ್ರಾಮಾಭಿವೃದ್ದಿಯಾದರೆ ದೇಶದ ಅಭಿವೃದ್ದಿ ಸಾಧ್ಯ:ಸಿದ್ದರಾಮಯ್ಯ

Spread the love

ಗ್ರಾಮಾಭಿವೃದ್ದಿಯಾದರೆ ದೇಶದ ಅಭಿವೃದ್ದಿ ಸಾಧ್ಯ:ಸಿದ್ದರಾಮಯ್ಯ

ಸುತ್ತೂರು: ಗ್ರಾಮೀಣ ಭಾಗದ ಅಭಿವೃದ್ದಿಯಾದರೆ ದೇಶದ ಅಭಿವೃದ್ದಿ ಸಾಧ್ಯ, ಆದ್ದರಿಂದ ಮುಂಬರುವ 2023ರ ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅಭಿವೃದ್ದಿ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದರು.

ವರುಣಾ ಕ್ಷೇತ್ರಕ್ಕೆ ಸೇರುವ ಸುತ್ತೂರು ಗ್ರಾಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ಜನರು ಆರೋಗ್ಯವಂತರಾಗಿದ್ದರೆ ಎಲ್ಲಾ ಕಾರ್ಯ ಚಟುವಟಿಕೆಗಳಿಗೂ ಭಾಗವಹಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಸರ್ಕಾರದಿಂದ ಸಿಗುವಂತಹ ಆರೋಗ್ಯ ಸಂಬಂಧಪಟ್ಟ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರಲ್ಲದೇ, ಗ್ರಾಮಗಳ ಸಮಗ್ರ ಅಭಿವೃದ್ದಿಯಾದರೆ ಗ್ರಾಮೀಣರ ಬದುಕು ಹಸನಾಗುತ್ತದೆ, ಶಿಕ್ಷಣ, ಆರೋಗ್ಯ, ಹಾಗೂ ಕೃಷಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿಯನ್ನು ಸಾಧಿಸಿದರೆ ಆರ್ಥಿಕವಾಗಿ ಮುಂದೆ ಬರಲು ಅನುಕೂಲವಾಗುತ್ತದೆ, ಆದ್ದರಿಂದ ಮುಂದಿನ ಚುನಾವಣೆಯಲ್ಲಿ ನಮ್ಮ ಸರ್ಕಾರ ಬಂದರೆ ಗ್ರಾಮೀಣಾಭಿವೃದ್ದಿಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಲೋಕೋಪಯೋಗಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ವರುಣಾ ಕ್ಷೇತ್ರದ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ, ಯುವ ಕಾಂಗ್ರೇಸ್ ಮುಖಂಡರಾದ ಸುನಿಲ್ ಬೋಸ್. ಕೆ.ಮರಿಗೌಡ, ಸುಮಿತ್ರಸಾಗರ್, ರಾಜ್ಯ ವಾಲ್ಮೀಕಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಗ್ರಾ.ಪಂ ಅಧ್ಯಕ್ಷೆ ಅಂಬಿಕಾ, ಉಪಾದ್ಯಕ್ಷ ನಾಗರಾಜು, ಪಿ.ಡಿ.ಒ ಮಹದೇವಸ್ವಾಮಿ, ಮಾಜಿ ಅಧ್ಯಕ್ಷ ವಿ.ಸೋಮಣ್ಣ, ಜಗದೀಶ್, ಗ್ರಾಮದ ಗೌಡರಾದ ಶಿವರಾತ್ರಿಸ್ವಾಮಿ, ಶಾಂತಕುಮಾರ್, ರವಿಕುಮಾರ್, ಕುಮಾರ್, ರಾಜೇಂಧ್ರ, ರಾಜು, ಗ್ರಾ.ಪಂ ಎಲ್ಲಾ ಸದಸ್ಯರು, ಗ್ರಾಮದ ಎಲ್ಲಾ ಜನಾಂಗದ ಮುಖಂಡರುಗಳು ಇದ್ದರು.


Spread the love