ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳಿಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳಿಗೆ ವ್ಯಾಕ್ಸಿನ್: ಸಚಿವ ಕೋಟ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್.ವೈ

Spread the love

ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳಿಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳಿಗೆ ವ್ಯಾಕ್ಸಿನ್: ಸಚಿವ ಕೋಟ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್.ವೈ

ಮಂಗಳೂರು: ಗ್ರಾಮ ಪಂಚಾಯತ್ ಮತ್ತು ನಗರಾಡಳಿತ ಸಂಸ್ಥೆಯ ಸ್ಥಳೀಯಾಡಳಿತ ಪ್ರತಿನಿಧಿಗಳನ್ನು ಕೋರೊನಾ ವಾರಿಯರ್ಸ್ ಎಂದು ಗುರುತಿಸಿ ಕೋರೊನಾ ವ್ಯಾಕ್ಸಿನ್ ನೀಡುವ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದು, ಈ ಮನವಿಯನ್ನು ಪುರಸ್ಕರಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರು, ಕರ್ನಾಟಕ ರಾಜ್ಯದಲ್ಲಿ 6,020ಕ್ಕೂ ಮಿಕ್ಕಿ ಗ್ರಾಮ ಪಂಚಾಯತ್‍ಗಳ 95,000ಕ್ಕೂ ಹೆಚ್ಚು ಪಂಚಾಯತ್ ಸದಸ್ಯರುಗಳಿಗೆ ಕೋವಿಡ್ ಚುಚ್ಚುಮದ್ದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದ್ದಾರೆ.

ರಾಜ್ಯದ ಪ್ರತಿ ಗ್ರಾಮ ಪಂಚಾಯತಗಳಲ್ಲಿ ಈಗ ಕೋವಿಡ್ ಕಾರ್ಯಪಡೆಯನ್ನು ರಚನೆ ಮಾಡಲಾಗಿದ್ದು, ಪ್ರತಿನಿತ್ಯವೂ ಸಭೆ ಸೇರಿ ಜನರ ಮಧ್ಯೆ ಸಂಪರ್ಕದಲ್ಲಿರುವುದು ಅವಶ್ಯವಾಗಿರುತ್ತದೆ.

ಪ್ರತಿ ವಾರ್ಡಿನಲ್ಲಿರುವ ಮನೆ ಮನೆಗೂ ವಾರ್ಡಿನ ಸದಸ್ಯರು ಭೇಟಿ ನೀಡಬೇಕೆಂದೂ ಹಾಗೂ ಪಂಚಾಯತ್‍ನ ಅಧ್ಯಕ್ಷರು, ಉಪಾಧ್ಯಕ್ಷರು ಇಡೀ ಗ್ರಾಮವನ್ನು ಗಮನಿಸಬೇಕೆ0ದು ಈಗಾಗಲೇ ಸರಕಾರ ನಿರ್ಧರಿಸಿದಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ನ ಕಾರ್ಯಪಡೆಗಳು ಕರ್ತವ್ಯ ನಿರ್ವಹಿಸುತ್ತಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮಹಾನಗರ ಪಾಲಿಕೆ, ನಗರ ಪಂಚಾಯತ್‍ಗಳು ಸೇರಿದಂತೆ ಇಡೀ ರಾಜ್ಯದಲ್ಲಿರುವಂತಹ ಎಲ್ಲಾ ನಗರಾಡಳಿತ ಸಂಸ್ಥೆಗಳ ಸದಸ್ಯರು ಕೂಡ ನಿತ್ಯ ಬಡವರ ಮನೆಯಲ್ಲಿ ನಿಂತುಕೊಂಡು ಕೋರೊನ ಪೀಡಿತರನ್ನು ಭೇಟಿ ಮಾಡಿ ಪ್ರತಿನಿತ್ಯ ಕರ್ತವ್ಯ ನಿರ್ವಹಿಸಿಕೊರೊನಾ ನಿಯಂತ್ರಣಕ್ಕೆ ತರುವಂತಹ ಕಾರ್ಯಕ್ರಮದಲ್ಲಿ ತಲ್ಲೀನರಾಗಿದ್ದಾರೆ.

ಇವರೆಲ್ಲರಿಗೂ ಕೂಡ ಕೋರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೊನಾ ವಾರಿಯರ್ಸ್‍ಗಳಿಗೆ ಕೊಟ್ಟಂತಹ ಪ್ರಾಶಸ್ತ್ಯವನ್ನು ಕೊಟ್ಟು ವ್ಯಾಕ್ಸಿನ್‍ಗಳನ್ನು ನೀಡುವಂತೆ ಸಚಿವರು ಮನವಿ ಮಾಡಿದ್ದರು.


Spread the love