Spread the love
ಚನ್ನರಾಯಪಟ್ಟಣ ಟೌನ್ ಎಸ್ಐ ನೇಣು ಬಿಗಿದು ಆತ್ಮಹತ್ಯೆ
ಹಾಸನ : ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ.
ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ನಿನ್ನೆ ರಾತ್ರಿ ಬಂಧಿತ ಆರೋಪಿಗಳಿಂದ ಮಹಜರು ನಡೆಸಿದ ಬಳಿಕ ರೂಮಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚನ್ನರಾಯಪಟ್ಟಣದ ತಮ್ಮ ಮನೆಯಲ್ಲಿ ಸಮವಸ್ತ್ರದಲ್ಲೇ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
Spread the love