Home Mangalorean News Kannada News ಚಲಿಸುತ್ತಿದ್ದ ಬಸ್‌ನಿಂದ ಇಬ್ಬರು ವಿದ್ಯಾರ್ಥಿಗಳು ಬಿದ್ದು ಗಾಯ, ಪ್ರಾಣಾಪಾಯದಿಂದ ಪಾರು

ಚಲಿಸುತ್ತಿದ್ದ ಬಸ್‌ನಿಂದ ಇಬ್ಬರು ವಿದ್ಯಾರ್ಥಿಗಳು ಬಿದ್ದು ಗಾಯ, ಪ್ರಾಣಾಪಾಯದಿಂದ ಪಾರು

Spread the love

ಚಲಿಸುತ್ತಿದ್ದ ಬಸ್‌ನಿಂದ ಇಬ್ಬರು ವಿದ್ಯಾರ್ಥಿಗಳು ಬಿದ್ದು ಗಾಯ, ಪ್ರಾಣಾಪಾಯದಿಂದ ಪಾರು

ಮಂಗಳೂರು: ಚಲಿಸುತ್ತಿದ್ದ KSRTC ಬಸ್‌ನಿಂದ ಇಬ್ಬರು ವಿದ್ಯಾರ್ಥಿನಿಯರು ಕೆಳಗೆ ಎಸೆಯಲ್ಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ರೇಷ್ಮೆ ರೋಡ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಪುತ್ತೂರಿನಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಕ್ಕ-ತಂಗಿ ಗೇರುಕಟ್ಟೆ ಎಂಬಲ್ಲಿ ಬಸ್ ಹತ್ತಿದ್ದರು.

ಬಸ್ ರೇಷ್ಮೆ ರೋಡ್ ತಲುಪುತ್ತಿದ್ದಂತೆ ತಿರುವಿನಲ್ಲೇ ಏಕಾಏಕಿ ಬಸ್ಸಿನ ಬಾಗಿಲು ತೆರೆದುಕೊಂಡಿದ್ದು, ನಿಯಂತ್ರಣ ತಪ್ಪಿದ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.

ಅಕ್ಕ ಕೆಳಗೆ ಬೀಳುತ್ತಿದ್ದಂತೆಯೇ ತಂಗಿ ಅವರನ್ನು ಹಿಡಿದುಕೊಳ್ಳಲು ಯತ್ನಿಸಿದರೂ, ಇಬ್ಬರೂ ಬಸ್‌ನಿಂದ ಕೆಳಗೆ ಬಿದ್ದಿದ್ದಾರೆ.
ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಾಯಗೊಂಡ ಇಬ್ಬರು ವಿದ್ಯಾರ್ಥಿನಿಯರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ..


Spread the love

Exit mobile version