ಚಾಮರಾಜನಗರದಲ್ಲಿ ಅರಣ್ಯ ಇಲಾಖೆಯ ಝಾನ್ಸಿ ಶ್ವಾನ ಸಾವು

Spread the love

ಚಾಮರಾಜನಗರದಲ್ಲಿ ಅರಣ್ಯ ಇಲಾಖೆಯ ಝಾನ್ಸಿ ಶ್ವಾನ ಸಾವು

ಚಾಮರಾಜನಗರ: ಸರ್ಕಾರೇತರ ಸಂಸ್ಥೆಯಾದ ಟ್ರಾಫಿಕ್ ಮತ್ತು ವಿಶ್ವ ವನ್ಯಜೀವಿ ನಿಧಿ (ವರ್ಲ್ಡ್ ವೈಲ್ಡ್ಲೈಫ್ ಫಂಡ್)  ಇಂಡಿಯಾ ವತಿಯಿಂದ ಚಂಡೀಗಢ ಇಂಡೋ – ಟಿಬೇಟಿನ್ ಬಾರ್ಡರ್ ಪೊಲೀಸ್ ಪೋರ್ಸ್ (ಐಟಿಬಿಪಿ) ನಲ್ಲಿ ಝಾನ್ಸಿ ಸುಮಾರು ಆರೇಳು ತಿಂಗಳು ಕಠಿಣ ತರಬೇತಿ ಪಡೆದು ಬಂದಿದ್ದ ಅರಣ್ಯ ಇಲಾಖೆಯ ಝಾನ್ಸಿ ಶ್ವಾನ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದೆ.

ಅರಣ್ಯ ಇಲಾಖೆ ಗಾರ್ಡ್ ಬಸವರಾಜುಗೆ ಹ್ಯಾಂಡ್ಲರ್ ತರಬೇತಿಯನ್ನೂ ನೀಡಲಾಗಿತ್ತು. ಝಾನ್ಸಿಗೆ ತರಬೇತಿಯಲ್ಲಿ ಬಾಂಬ್ ಪತ್ತೆ, ದುಷ್ಕರ್ಮಿಗಳು ಮತ್ತು ವಸ್ತುಗಳ ವಾಸನೆ ಗ್ರಹಿಸುವಿಕೆ, ಅಪರಾಧಿಗಳ ಬೆನ್ನತ್ತುವ ಚಾಣಾಕ್ಷತೆ ಬಗ್ಗೆ ಕಲಿಸಲಾಗಿತ್ತು. ಈ ತರಬೇತಿಯಲ್ಲಿ ಹಲವು ಶ್ವಾನಗಳು ಮತ್ತು ಹ್ಯಾಂಡ್ಲರ್ಸ್‌ಗಳು ಭಾಗವಹಿಸಿದ್ದರು. ಭಾರತೀಯ ರೈಲ್ವೆಯ ದಕ್ಷಿಣ ಮತ್ತು ಪಶ್ಚಿಮ ಮಧ್ಯಪ್ರದೇಶ, ಛತ್ತೀಸ್‌ಗಡ, ಒಡಿಶಾ ಅರಣ್ಯ ಇಲಾಖೆ, ಉತ್ತರಪ್ರದೇಶ, ಗುಜರಾತ್, ತಮಿಳುನಾಡು ಅರಣ್ಯ ಇಲಾಖೆಗೆ ಒಂದೊಂದು ಶ್ವಾನ ನೀಡಲಾಗಿತ್ತು. ಅದರಂತೆ, ಕರ್ನಾಟಕದಲ್ಲಿ ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೆ ಝಾನ್ಸಿ ಸಿಕ್ಕಿದ್ದಳು.

2021ರ ನವೆಂಬರ್‌ನಲ್ಲಿ ಅರಣ್ಯ ಇಲಾಖೆ ಕಚೇರಿಗೆ ಬಂದ ಝಾನ್ಸಿ ಎದುರು ಅಂದಿನ ಹುಲಿ ಯೋಜನೆ ನಿರ್ದೇಶಕ ಸಂತೋಷ್‌ ಕುಮಾರ್ ನಿಂತಿದ್ದರು. ಹ್ಯಾಂಡ್ಲರ್ ಸೂಚನೆ ಕೊಟ್ಟ ಕೂಡಲೇ ತನ್ನ ಗ್ರಹಿಕಾ ಶಕ್ತಿ ಪ್ರದರ್ಶಿಸಿ, ಝಾನ್ಸಿ ಅಧಿಕಾರಿಗಳಿಗೆ ಗೌರವ ಸಲ್ಲಿಸಿದ್ದಳು.


Spread the love

Leave a Reply

Please enter your comment!
Please enter your name here