ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು – ರಾಜ್ಯದಲ್ಲಿ ಸರ್ಕಾರ ಇದ್ದು ಇಲ್ಲದಂತಾಗಿದೆ — ಶೌವಾದ್ ಗೂನಡ್ಕ

Spread the love

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು – ರಾಜ್ಯದಲ್ಲಿ ಸರ್ಕಾರ ಇದ್ದು ಇಲ್ಲದಂತಾಗಿದೆ — ಶೌವಾದ್ ಗೂನಡ್ಕ

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಏನು ಮಾಡುತ್ತಿದೆ ಎಂದು ತಿಳಿಯುತ್ತಿಲ್ಲ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಇಡೀ ದೇಶಕ್ಕೆ ಕಪ್ಪುಚುಕ್ಕೆಯಾಗಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡಬಾರದು ಆದರೆ ಸರ್ಕಾರದ ವೈಫಲ್ಯದಿಂದಾಗಿ ಇಂತಹ ದುರ್ಘಟನೆಗಳು ಉಂಟಾಗುತ್ತದೆ ರಾಜ್ಯದಲ್ಲಿ ಸರ್ಕಾರ ಇದ್ದು ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕರವರು  ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಡಜನರ ಆರೋಗ್ಯಕ್ಕೆ ಬೆಲೆ ಇಲ್ಲದಂತಾಗಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದರು? ಅವರಿಗೆ ಪರಿಸ್ಥಿತಿಯ ಅರಿವಿಲ್ಲವೇ? ಬಡರೋಗಿಗಳ ಸಾವಿಗೆ ರಾಜ್ಯ ಸರ್ಕಾರ ಸಂಪೂರ್ಣ ಹೊಣೆ ಹೊತ್ತು ತಕ್ಷಣವೇ ಮೃತ ಕುಟುಂಬಗಳಿಗೆ ಪರಿಹಾರವನ್ನು ನೀಡಬೇಕೆಂದು ಶೌವಾದ್ ಗೂನಡ್ಕರವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಮಾಧ್ಯಮಗಳ ಮೂಲಕ ಕೋವಿಡ್ ರೋಗಿಗಳಿಗೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸುತ್ತಾರೆ ಆದರೆ ರಾಜ್ಯದ ವಾಸ್ತವ ಚಿತ್ರಣ ಬೇರೆಯೇ ಇದೆ ಎಂದವರು ಹೇಳಿದ್ದಾರೆ.


Spread the love

Leave a Reply

Please enter your comment!
Please enter your name here