ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ 

Spread the love

ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ 
 
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದೆ.

ನಿರೀಕ್ಷೆಯಂತೆ ಬಳ್ಳಾರಿ ಲೋಕಸಭಾ ಟಿಕೆಟ್ ಇ ತುಕರಾಂ, ಚಾಮರಾಜನಗರ ಕ್ಷೇತ್ರದ ಟಿಕೆಟ್​ ಸಚಿವ ಎಚ್​ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್​ಗೆ ನೀಡಲಾಗಿದೆ.


Spread the love

Leave a Reply