ಚಿಕ್ಕಮಗಳೂರು: ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು

Spread the love

ಚಿಕ್ಕಮಗಳೂರು: ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು

ಚಿಕ್ಕಮಗಳೂರು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತಪಟ್ಟ ಘಟನೆ ಆಗುಂಬೆ ಸಮೀಪದ ಕೊಪ್ಪ ಬಳಿ ಸಂಭವಿಸಿದ್ದು, ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಮೃತಪಟ್ಟ ವ್ಯಕ್ತಿಯನ್ನು ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಎಂದು ಗುರುತಿಸಲಾಗಿದೆ.

ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಯಕ್ಷಗಾನ ಪ್ರದರ್ಶನ ಮಳೆಯಿಂದ ರದ್ದಾಗಿದ್ದು, ಸ್ಕೂಟರ್ ನಲ್ಲಿ ವಾಪಾಸಾಗುತ್ತಿದ್ದ ವೇಳೆ ಆಗುಂಬೆ ಕೊಪ್ಪ ಸಮೀಪ ವಿದ್ಯುತ್ ತಂತಿ ಮೈಮೇಲೆ ಬಿದ್ದಿದ್ದು, ದ್ವಿಚಕ್ರ ವಾಹನ ಬಿಡುತ್ತಿದ್ದ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಸ್ಥಳೀಯರ ಸಹಕಾರದಿಂದ ತುರ್ತು ವಾಹನದ ಮೂಲಕ ಮಣಿಪಾಲ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಹ ಸವಾರ ವಿನೋದ್ ರಾಜ್ ಘಟನೆಯಲ್ಲಿ ಪಾರಾಗಿದ್ದಾರೆ.

ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love