ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು

Spread the love

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು

ಬೆಂಗಳೂರು: ಆರ್.ಸಿ.ಬಿ. ಮೊದಲ ಬಾರಿ ಐಪಿಎಲ್ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್) ದಾಖಲಿಸಿಕೊಂಡಿದೆ.

ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ.ಸಿ.ಎಂ. ಜೋಶಿಯವರಿದ್ದ ಪೀಠ, ವಿಚಾರಣೆ ನಡೆಸಿ ದುರಂತದ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಇಂದು ಅಪರಾಹ್ನ 2:30ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಜನರ ಸಾವುನೋವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್ ಪೀಠ, ಭದ್ರತಾ ಲೋಪದ ಬಗ್ಗೆ ಸರಕಾರದ ವರದಿ ಕೇಳಲಾಗಿದೆ. ವಿಚಾರಣೆ 2:30ಕ್ಕೆ ನಿಗದಿಯಾಗಿದೆ ಎಂದು ತಿಳಿಸಿದೆ.

ಪತ್ರಿಕೆಗಳಲ್ಲಿ ಬಂದ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್ ನಿನ್ನೆ ನಡೆದ ಘಟನೆ ತೀವ್ರ ಕಳವಳಕಾರಿಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಭ್ರಮಾಚರಣೆಗೆ ರಾಜ್ಯ ಸರಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಸೂಚನೆ ನೀಡಿದೆ. ವಿಚಾರಣೆ ವೇಳೆ ಉಪಸ್ಥಿತರಿದ್ದ ಎಜಿ ಶಶಿಕಿರಣ್ ಶೆಟ್ಟಿ, ಹೈಕೋರ್ಟ್ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು. ನಡೆದ ಘಟನೆ, ಸರಕಾರ ಕೈಗೊಂಡಿರುವ ಕ್ರಮ ಎಲ್ಲದರ ಮಾಹಿತಿ ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ. ಎಲ್ಲಾ ವಿವರಗಳನ್ನು ಒದಗಿಸುವುದಾಗಿ ಎಜಿ ಶಶಿಕಿರಣ್ ಶೆಟ್ಟಿ ಹೈಕೋರ್ಟ್ ಗೆ ಮಾಹಿತಿ ನೀಡಿದರು. ಬಳಿಕ ಹೈಕೋರ್ಟ್ ವಿಚಾರಣೆಯನ್ನು ಅಪರಾಹ್ನ2:30ಕ್ಕೆ ಮುಂದೂಡಿತು.

 ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಿಗದಿಯಾಗಿತ್ತು. ತಂಡಕ್ಕೆ ಶುಭಾಶಯ ಕೋರಲು, ಸಂಭ್ರಮ ಆಚರಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಬಂದಿದ್ದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 47 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments