ಚುನಾವಣಾ ನೀತಿ ಸಂಹಿತೆ ಸಿದ್ದರಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಆಯೋಗ

Spread the love

ಚುನಾವಣಾ ನೀತಿ ಸಂಹಿತೆ ಸಿದ್ದರಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಆಯೋಗ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ. ಹೀಗಾಗಿ ಮಾರ್ಚ್ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ.


Spread the love