ಚುನಾವಣೆ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಿ: ಡಿಸಿ ಡಾ.ಕೆ.ವಿ.ರಾಜೇಂದ್ರ

Spread the love

ಚುನಾವಣೆ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಿ: ಡಿಸಿ ಡಾ.ಕೆ.ವಿ.ರಾಜೇಂದ್ರ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.90ಕ್ಕಿಂತ ಹೆಚ್ಚು ಮತದಾನವಾಗುವಂತೆ ಎಲ್ಲರೂ ಶ್ರಮಿಸುವ ಮೂಲಕ ರಾಜ್ಯದಲ್ಲಿಯೇ ನಂ.1 ಸ್ಥಾನಕ್ಕೇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪೂರ್ವ ಸಿದ್ಧತೆಗಳು ಹಾಗೂ ಸ್ವೀಪ್ ಸಮಿತಿ ಚಟುವಟಿಕೆ ಬಗ್ಗೆ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆ ಎಂದರೆ ಪ್ರಜಾಪ್ರಭುತ್ವದ ಹಬ್ಬ, ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದರು. ನಗರ ಪ್ರದೇಶಕ್ಕಿಂತ ಗ್ರಾಮಾಂತರ ಭಾಗದಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಿದೆ. ಚಾಮರಾಜ ಕ್ಷೇತ್ರದಲ್ಲಿ 58.18, ಕೃಷ್ಣರಾಜ ಕ್ಷೇತ್ರದಲ್ಲಿ ಶೇ.58.28, ನರಸಿಂಹರಾಜ ಕ್ಷೇತ್ರದಲ್ಲಿ ಶೇ.61ರಷ್ಟು ಮತದಾನವಾಗುವ ಮೂಲಕ ಒಟ್ಟು 72.12ರಷ್ಟು ಮಾತ್ರ ಮತದಾನವಾಗಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಎಲ್ಲಾ ಕ್ಷೇತ್ರಗಳಿಂದ ಶೇ.90ಕ್ಕಿಂತ ಅಧಿಕ ಮತದಾನವಾಗುವಂತೆ ಶ್ರಮಿಸಬೇಕು ಎಂದರು.

ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್ ಹಾಗೂ ತಾಪಂ ಇಒಗಳು ಮತಗಟ್ಟೆ ಮಟ್ಟದ ಜಾಗೃತಿ ತಂಡ ರಚಿಸಿಕೊಳ್ಳಬೇಕು. ಹಣ, ಉಡುಗೊರೆ, ಮದ್ಯ ಮೊದಲಾದ ಆಮಿಷ ಕೊಡುತ್ತಿದ್ದರೆ ಅವರ ಮೂಲಕ ಮಾಹಿತಿ ಪಡೆದು, ಅಕ್ರಮಗಳನ್ನು ತಡೆಯಬೇಕು ಎಂದು ಸೂಚಿಸಿದರು.

ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ವೀಪ್ ಕಾರ್ಯಕ್ರಮ ಅಂಗವಿಕಲರು, ತೃತೀಯ ಲಿಂಗಿಗಳು ಹಾಗೂ ಆದಿವಾಸಿ ಸಮುದಾಯವನ್ನು ಬಿಟ್ಟು ಹೋಗುವಂತಿಲ್ಲ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೆಲವೆಡೆ ಚುನಾವಣೆ ಬಹಿಷ್ಕಾರ ಹಾಕುವ ಪ್ರಸಂಗ ನಡೆಯುತ್ತದೆ. ಈಗಲೇ ಅಂತಹ ಪ್ರದೇಶಗಳನ್ನು ಗುರುತಿಸಿ ಅವರೊಂದಿಗೆ ಸಮನ್ವಯತೆ ಸಾಧಿಸಬೇಕು ಎಂದರು.

ಜಿಲ್ಲೆಯಲ್ಲಿರುವ ಪ್ರಮುಖರು, ಜನಪ್ರತಿನಿಧಿಗಳು, ಮುಖಂಡರು, ಸಾಹಿತಿಗಳು, ಉದ್ಯಮಿಗಳ ಹೆಸರು ಕೆಲವೊಮ್ಮೆ ಮತದಾರರ ಪಟ್ಟಿಯಲ್ಲಿ ಇಲ್ಲದೇ ಹೋದರೆ ಸಮಸ್ಯೆಯಾಗಲಿದೆ. ಈ ಹಿನ್ನೆಲೆ ವಿಐಪಿ, ವಿವಿಐಪಿಗಳು, ಜನಪ್ರತಿನಿಧಿಗಳ ಹೆಸರು ಪಟ್ಟಿಯಲ್ಲಿ ಇದೆಯೇ ಎನ್ನುವುದನ್ನು ಈಗಲೇ ಖಾತ್ರಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೈಸೂರು ಎಂದರೆ ಪ್ರಜ್ಞಾವಂತರ ನಾಡು. ಕಲೆ, ಸಾಹಿತ್ಯ ಹಾಗೂ ಪ್ರೇPಣೀಯ ಸ್ಥಳಗಳ ಆಗರವಾಗಿರುವ ಮೈಸೂರು ತನ್ನದೇ ಆದ ವಿಶೇಷತೆಗಳನ್ನೊಂದಿದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನ ಮಾಡುವ ಮೂಲಕ ಮಾದರಿ ಜಿಲ್ಲೆಯನ್ನಾಗಿಸಲು ಎ ಅಧಿಕಾರಿ ನೌಕರರು ಕಾರ್ಯೋನ್ಮುಖರಾಗಬೇಕು. ವಿಮಾನನಿಲ್ದಾಣ, ಬಸ್ ಹಾಗೂ ರೈಲು ನಿಲ್ದಾಣ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡು ಸೇರಿದಂತೆ ವಿವಿಧ ಪ್ರವಾಸಿ ತಾಣಗಳಲ್ಲಿ ಸ್ವೀಪ್ ಚಟುವಟಿಕೆಗಳು ನಡೆಯುವಂತೆ ಮಾಡಬೇಕು ಎಂದರು.

ಈಗಾಗಲೇ ಜಿಲ್ಲೆಯಲ್ಲಿ ಸ್ವೀಪ್ ಮುಖಾಂತರ ಮತದಾನ ಜಾಗೃತಿ ಕಾರ್ಯಕ್ರಮಗಳು ಆರಂಭಗೊಂಡಿದ್ದು ಮತ್ತಷ್ಟು ಚುರುಕುಗೊಳಿಸಬೇಕಾಗಿದೆ. ವಿವಿಧ ವರ್ಗಗಳ ಮತದಾರರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ, ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು, ಎಚ್‌ಐವಿ ಪೀಡಿತರು, ವಿಕಲಚೇತನರು ಮುಂತಾದ ವರ್ಗಗಳನ್ನು ತಲುಪುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ಮತದಾನದ ಕುರಿತು ಜನರಲ್ಲಿ ಜಾಗೃತಿಗಾಗಿ ಸಿದ್ಧಪಡಿಸಿರುವ ಧ್ಯೇಯಗೀತೆ ನಮ್ಮ ಭಾರತ ಹಾಡು ಎ ಕಡೆ ಪ್ರಸಾರವಾಗುವಂತೆ ಹಾಗೂ ನಗರದಲ್ಲಿ ಕಸ ವಿಲೇವಾರಿ ವಾಹನಗಳಲ್ಲಿ 30 ಸೆಕೆಂಡ್‌ಗಳಂತೆ ಪ್ರಸಾರವಾಗುವಂತೆ ನೋಡಿಕೊಳ್ಳಬೇಕು ಎಂದರು.

ಈ ಹಿಂದಿನ ಚುನಾವಣೆಗಳಲ್ಲಿ ಅತಿಹೆಚ್ಚು ಮತದಾನವಾಗಿರುವ ಹಾಗೂ ಅತ್ಯಂತ ಕಡಿಮೆ ಮತದಾನವಾಗಿರುವ ಮತಗಟ್ಟೆ ಮತ್ತು ಪ್ರದೇಶಗಳನ್ನು ಗುರುತಿಸಿ ಕಾರಣಗಳನ್ನು ಕಂಡುಕೊಂಡು ಈ ಬಾರಿ ಮತದಾನ ಹೆಚ್ಚಳಕ್ಕೆ ಆಗಬೇಕಿರುವ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು. ವಿವಿಧ ಮಾಧಮಗಳಲ್ಲಿ ಪ್ರಚಾರಕ್ಕೆ ಹೆಚ್ಚು ಒತ್ತು ಕೊಡಬೇಕು, ಬೀದಿನಾಟಕ, ಚರ್ಚಾಸ್ಪರ್ಧೆ, ಕರಪತ್ರ, ಭಿತ್ತಿಪತ್ರ, ಬ್ಯಾನರ್, ಅಣಕು ಪ್ರದರ್ಶನ ಮುಂತಾದವುಗಳ ಮೂಲಕ ಎವರ್ಗದ ಮತದಾರರನ್ನು ತಲುಪಬೇಕು ಎಂದು ಸೂಚಿಸಿದರು.


Spread the love