ಚೂರಿಯಿಂದ ಇರಿದು ರೌಡಿಶೀಟರ್ ಕೊಲೆ

Spread the love

ಚೂರಿಯಿಂದ ಇರಿದು ರೌಡಿಶೀಟರ್ ಕೊಲೆ
 

ಮಂಗಳೂರು: ರೌಡಿಶೀಟರ್ ಓರ್ವನಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಂಪಾಡಿ ಮೀನಾ ಕಾಳಿ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ರೌಡಿಶೀಟರ್ ರಾಘವೇಂದ್ರ ಅಲಿಯಾಸ್ ರಾಜ (28) ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ರಾಘವೇಂದ್ರನಿಗೆ ಚಾಕುವಿನಿಂದ ಇರಿದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದುಷ್ಕರ್ಮಿಗಳನ್ನು ರಾಘವೇಂದ್ರನ ಸ್ನೇಹಿತರೆಂದು ಆರೋಪಿಸಲಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love