ಜನಗಣತಿ: ಮನೆಗಣತಿಗೆ ಸ್ಪೀಕರ್ ಯು.ಟಿ ಖಾದರ್ ಚಾಲನೆ

Spread the love

ಜನಗಣತಿ: ಮನೆಗಣತಿಗೆ ಸ್ಪೀಕರ್ ಯು.ಟಿ ಖಾದರ್ ಚಾಲನೆ

ಮಂಗಳೂರು: ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು.

ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು. ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ಲೈನ್ನಲ್ಲಿ ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು.

ನಾಗರಿಕರು ಸ್ವಯಂ ಆಗಿ ಆನ್ಲೈನ್ನಲ್ಲಿ ತಮ್ಮ ಮನೆಯ ಮಾಹಿತಿ ದಾಖಲಿಸಬಹುದು ಅಥವಾ ಗಣತಿದಾರರು ಮನೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಬೇಕು ಎಂದು ಅವರು ತಿಳಿಸಿದರು.


Spread the love
Subscribe
Notify of

0 Comments
Inline Feedbacks
View all comments