ಜನರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅರಿವು ಮೂಡಿಸಿ

Spread the love

ಜನರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅರಿವು ಮೂಡಿಸಿ

ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲ್ಯ ವಿವಾಹ ನಿಷೇದ ಕಾಯ್ದೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ (ಮಾನವ ಸಾಗಾಣಿಕೆ) ತಡೆಗಟ್ಟುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅನುಷ್ಠಾನ ಸಂಬಂಧ ವಸತಿ ನಿಲಯಗಳ ಮೇಲ್ವಿಚಾರಕರಿಗೆ, ದೇವಸ್ಥಾನಗಳ ಪೂಜಾರಿಗಳಿಗೆ, ಮುದ್ರಣಾಲಯಗಳ ಮಾಲೀಕರಿಗೆ, ಕಲ್ಯಾಣ ಮಂಟಪಗಳ ವ್ಯವಸ್ಥಾಪಕರಿಗೆ, ಸಾಮೂಹಿಕ ವಿವಾಹಗಳ ಆಯೋಜಕರಿಗೆ, ಧಾರ್ಮಿಕ ಮುಖಂಡರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಾಗಾರಗಳನ್ನು ಬಹಳ ಪರಿಣಾಮಕಾರಿ ನೀಡಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಗೋಡೆಬರಹ, ಭಿತ್ತಿ ಚಿತ್ರಗಳು, ಬೀದಿ ನಾಟಕ ಪ್ರದರ್ಶನಗಳ ಮೂಲಕ ಜಾಗೃತಿ ಮೂಡಿಸಿ ಎಂದರು.

ಬಾಲ್ಯ ವಿವಾಹ ತಡೆ ಸಂಬಂಧ ಮಕ್ಕಳ ಗ್ರಾಮ ಸಭೆಯನ್ನು ಪರಿಣಾಮಕಾರಿಯಾಗಿ ನಡೆಸಿ ಎಂದ ಜಿಲ್ಲಾಧಿಕಾರಿಗಳು ಬಾಲ್ಯ ವಿವಾಹ ತಡೆ ಸಂಬಂಧ ಪೊಲೀಸ್ ಇಲಾಖೆ, ಕಂದಾಯ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಎಲ್ಲಾ ಇಲಾಖೆ ಸೇರಿ ಮತ್ತೊಂದು ಸಭೆಯನ್ನು ನಡೆಸಲಾಗುವುದು ಎಂದರು.

ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಮಹಿಳೆಯರು ಹಾಗೂ ಮಕ್ಕಳ ಅನೈತಿಕ ಸಾಗಾಣಿಕೆ ನಿಷೇಧದ ಬಗ್ಗೆ ಗ್ರಾಮ ಪಂಚಾಯತ್ ಮಟ್ಟದ ಕಾವಲು ಸಮಿತಿ ಸದಸ್ಯರಿಗೆ ಉಪಗ್ರಹ ಆಧಾರಿತ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗಿದೆ ಹಾಗೂ ಪೋಷಣ್ ಅಭಿಯಾನ ಯೋಜನೆಯಡಿ ಜಿಲ್ಲಾ ಕಲಾತಂಡಗಳ ಒಕ್ಕೂಟದ ಮೂಲಕ ಬೀದಿ ನಾಟಕ ಪ್ರದರ್ಶನ ಸಂದರ್ಭದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಜಾಗೃತಿ ಗೀತೆಗಳು ಮತ್ತು ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದರು.

2020-21 ನೇ ಸಾಲಿನಲ್ಲಿ ಬಾಲ್ಯವಿವಾಹ ತಡೆದಿರುವ, ನಡೆದಿರುವ ಮತ್ತು ಪ್ರಥಮ ವರ್ತಮಾನ ವರದಿ ಆಗಿರುವ ಪ್ರಕರಣಗಳನ್ನು ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಿ ಎಂದರಲ್ಲದೆ, ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಸಂಬAಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿ, 2020-21 ನೇ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳ ಪರಿಶೀಲನೆ ನಡೆಸಿದರಲ್ಲದೆ, ಮಾನವ ಸಾಗಾಣಿಕೆ ಸಂಬಂಧ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾವಲು ಸಮಿತಿ ಸದಸ್ಯರಿಗೆ ಪರಿಣಾಮಕಾರಿಯಾಗಿ ತರಬೇತಿ ನೀಡಿ ಎಂದರು.

ಸಭೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜುಮೂರ್ತಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love