ಜನವರಿಯಲ್ಲಿ ಕರಾವಳಿ ಉತ್ಸವ: ಡಾ. ಕುಮಾರ್ 

Spread the love

ಜನವರಿಯಲ್ಲಿ ಕರಾವಳಿ ಉತ್ಸವ: ಡಾ. ಕುಮಾರ್ 

ಮಂಗಳೂರು: ಮುಂಬರುವ 2023ರ ಜನವರಿ ಮಾಹೆಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ಡಿ.20ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಸಂಜೆಯೊಳಗೆ ಕರಾವಳಿ ಉತ್ಸವದ ದಿನಾಂಕವನ್ನು ನಿಗದಿ ಪಡಿಸಲಾಗುವುದು, ಕರಾವಳಿ ಉತ್ಸವದ ಪೂರ್ವಭಾವಿ ಸಿದ್ಧತೆಗೆ ವಿವಿಧ ಸಮಿತಿಗಳು, ಉಪ ಸಮಿತಿಗಳನ್ನು ರಚಿಸಿ, ತಮ್ಮ ಹಂತದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇμÉಗಳನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಲು ಸೂಚಿಸಿದ ಅವರು, ಬೇಕಾದ ಅನುದಾನದ ಬಿಡುಗಡೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.

ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ವೇದಿಕೆಯಲ್ಲಿದ್ದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಯವರು ಉಪಸ್ಥಿತರಿದ್ದರು.


Spread the love