ಜಲೀಲ್​ ಕೊಲೆ ಪ್ರಕರಣದಲ್ಲಿ ಮೂವರ ಬಂಧನ

Spread the love

ಜಲೀಲ್​ ಕೊಲೆ ಪ್ರಕರಣದಲ್ಲಿ ಮೂವರ ಬಂಧನ

ಮಂಗಳೂರು: ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಕಾಪುವಿನ ಲಾಡ್ಜ್ ಒಂದರಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು.

ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳು. 2021ರಲ್ಲಿ ನಡೆದ ಕೊಲೆ ಯತ್ನದ ಕೇಸ್ ವೊಂದರಲ್ಲೂ ಅವರು ಇದ್ದರು. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


Spread the love