ಜಲೀಲ್ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ; ಸಾಂತ್ವನ

Spread the love

ಜಲೀಲ್ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ; ಸಾಂತ್ವನ

ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕಾಟಿಪಳ್ಳ ನಿವಾಸಿ ಅಬ್ದುಲ್ ಜಲೀಲ್ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಸೋಮವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿತು.

ಈ ಘಟನೆಯನ್ನು ಸರಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೊಲೆಯಾದ ಜಲೀಲ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಶೀಘ್ರ ಒದಗಿಸಬೇಕು ಹಾಗೂ ಆರೋಪಿಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಕೂಡಲೇ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮೃತ ಕುಟುಂಬಸ್ಥರಿಗೆ ಭರವಸೆ ನೀಡಿದರು.

ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಮೊಯ್ದೀನ್ ಬಾಬಾ, ಐವನ್ ಡಿಸೋಜಾ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಟಿ.ಎಂ.ಶಹೀದ್ ತೆಕ್ಕಿಲ್, ಕವಿತಾ ಸನಿಲ್, ಪ್ರತಿಭಾ ಕುಳಾಯಿ, ಎಸ್.ಅಪ್ಪಿ ಮತ್ತಿತರರು ಉಪಸ್ಥಿತರಿದ್ದರು.


Spread the love