ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ, ಗೌರವ

Spread the love

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ, ಗೌರವ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಬಂಟ್ಸ್ ಹಾಸ್ಟೇಲ್‌ನ ಅಮೃತೋತ್ಸವ ಕಟ್ಟಡದಲ್ಲಿ ನಡೆದ ಸಮಾಜ ಕಲ್ಯಾಣ ಕಾರ್ಯಕ್ರಮ ದಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿ ಸಲಾಯಿತು.

ಪತ್ರಿಕೋದ್ಯಮ ಕ್ಷೇತ್ರದ ಸಾಧನೆ ಗಾಗಿ ರಾಷ್ಟ್ರೀಯ ಕಣ್ಮಣಿ ರಾಷ್ಟ್ರ ಪ್ರಶಸ್ತಿ ಪಡೆದ ಮಾಲತಿ ಶೆಟ್ಟಿ ಮಾಣೂರು ಹಾಗೂ ಇನ್ನೋರ್ವ ಪತ್ರಕರ್ತ ನಿಶಾಂತ್ ಶೆಟ್ಟಿ ಕಿಲೆಂಜೂರು ಅವರನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಸನ್ಮಾನಿಸಿ ದರು.

ಇದೇ ವೇಳೆ ಚಲನ ಚಿತ್ರರಂಗದ ನಿರ್ದೇಶಕ ಎಸ್. ವಿ ರಾಜೇಂದ್ರ ಸಿಂಗ್ ಬಾಬು, ನಾಟಕ ರಚನೆಕಾರ, ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್, ಒಕ್ಕೂಟದ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಲಯನ್ಸ್ ಗವರ್ನರ್ ವಸಂತ ಶೆಟ್ಟಿ ಅವರನ್ನು ಗೌರವಿಸ ಲಾಯಿತು.

ಸಮಾರಂಭದಲ್ಲಿ ಒಕ್ಕೂಟದ ಪದಾಧಿಕಾರಿ ಗಳಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಉಳ್ತೂರು ಮೋಹನದಾಸ್ ಶೆಟ್ಟಿ, ಸತೀಶ ಅಡಪ ಸಂಕಬೈಲ್ ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love