ಜಾನುವಾರುಗಳ ಕಳವು ಪ್ರಕರಣದ ಇಬ್ಬರು ಆರೋಪಿಗಳ ಬಂಧನ

Spread the love

ಜಾನುವಾರುಗಳ ಕಳವು ಪ್ರಕರಣದ ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಜಾನುವಾರುಗಳ ಕಳವು ಪ್ರಕರಣದ ಆರೋಪದ ಮೇರೆಗೆ ಪೊಲೀಸರು ವಾಹನ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತರನ್ನು ಬೋಳಂತೂರು ಗ್ರಾಮದ ನಿವಾಸಿ ನಜಾದುದ್ದೀನ್ ಹಾಗೂ ಅರ್ಕುಳ ಗ್ರಾಮದ ಅಬ್ದುಲ್ ಸಲಾಂ ಎಂದು ಗುರುತಿಸಲಾಗಿದ್ದು, ಬಂಧಿತರಿಂದ ಕಾರು, ದನವೊಂದನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನ. 28ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪನಡುವಿನಲ್ಲಿ ಸಜೀಪದಿಂದ ಕಂಚಿನಡ್ಕಕ್ಕೆ ತೆರಳುವ ರಸ್ತೆಯಲ್ಲಿ ದನಗಳ ಕಳವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ.12ರಂದು ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಓಮ್ನಿ ಕಾರು, ಕಳವು ಮಾಡಿದ್ದ ಹಸುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ನಗರ ಠಾಣಾ ಅದಲ್ಲದೆ, ಕಾರಾಜೆ ಮತ್ತು ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರಿನಲ್ಲಿ ದನವನ್ನು ಕಳವು ಮಾಡಿರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.


Spread the love

1 Comment

Comments are closed.