ಜಾರ್ಖಂಡ್ ಮೂಲದ ಮಹಿಳೆ ನಾಪತ್ತೆ: ಪತ್ತೆಗೆ ಮನವಿ

Spread the love

ಜಾರ್ಖಂಡ್ ಮೂಲದ ಮಹಿಳೆ ನಾಪತ್ತೆ: ಪತ್ತೆಗೆ ಮನವಿ

ಮಂಗಳೂರು: ಜಾರ್ಖಂಡ್ ಮೂಲದ ಕರ್ಮಿಲಿಯ ಸೊರೆನ್ (48) ಎಂಬವರು ಮೂಡುಬಿದಿರೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದು, ಜೂನ್ 9 ರಂದು ಮನೆಯಿಂದ ಹೋದವರು ಕಾಣೆಯಾಗಿದ್ದು, ಈ ಬಗ್ಗೆ ಮೂಡಬಿದ್ರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ಚಹರೆ: ಎತ್ತರ 5 ಅಡಿ, ಕಪ್ಪು ಮೈಬಣ್ಣ, ಬಿಳಿ ಮಿಶ್ರಿತ ಕಪ್ಪು ಮಿಶ್ರಿತ ತಲೆ ಕೂದಲು, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ಕಾಣೆಯಾದ ದಿನ ಪಿಂಕ್ ಬಣ್ಣದ ನೈಟಿ ಧರಿಸಿದ್ದರು.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮೂಡಬಿದಿರೆ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments