ಜಿಡಿಪಿಯಲ್ಲಿ ಮಂಗಳೂರಿಗೆ ಎರಡನೇ ಸ್ಥಾನ: ನಳಿನ್ ಕುಮಾರ್ ಕಟೀಲ್

Spread the love

ಜಿಡಿಪಿಯಲ್ಲಿ ಮಂಗಳೂರಿಗೆ ಎರಡನೇ ಸ್ಥಾನ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಆರ್ಥಿಕ ಪ್ರಗತಿಯ ಅಳತೆಗೋಲಾದ ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ)ಯಲ್ಲಿ ರಾಜ್ಯದಲ್ಲಿಯೇ ಮಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಹರ್ಷ ವ್ಯಕ್ತ ಪಡಿಸಿದರು.

ಅವರು ಡಿ.22ರ ಗುರುವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಾಣಿಜ್ಯ ಚಟುವಟಿಕೆಗಳು ಹೆಚ್ಚಿರುವ ಹುಬ್ಬಳ್ಳಿ ಅಥವಾ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಮೈಸೂರಿಗಿಂತಲೂ ಜಿಡಿಪಿಯಲ್ಲಿ ಮಂಗಳೂರು ಎರಡನೇ ಸ್ಥಾನದಲ್ಲಿರುವುದಕ್ಕೆ ನಾಗರೀಕರು, ಉದ್ದಿಮೇದಾರರು, ಬ್ಯಾಂಕರುಗಳು, ಛೆಂಬರ್ ಆಫ್ ಕಾಮರ್ಸ್‍ನವರು ಕಾರಣರಾಗಿದ್ದಾರೆ ಎಂದರು.

ಬ್ಯಾಂಕುಗಳ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿಗಧಿತ ಗುರಿ ತಲುಪದ ಬ್ಯಾಂಕುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು, ಆ ಬ್ಯಾಂಕುಗಳಲ್ಲಿ ಸರ್ಕಾರದ ಹಣವಿದ್ದಲ್ಲೀ ಕೂಡಲೇ ಅದನ್ನು ತೆಗೆದು ಇತರೆ ಬ್ಯಾಂಕುಗಳಲ್ಲಿ ಇರಿಸುವಂತೆ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಅವರು ಮಾತನಾಡಿ, ತಲಾ ಆದಾಯ (ಪರ್ ಕ್ಯಾಪಿಟಲ್ ಇನ್‍ಕಮ್)ದಲ್ಲೂ ಮಂಗಳೂರು ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದಿದೆ, ಕೈಗಾರಿಕೆಗಳು, ಉದ್ದಿಮೆಗಳು, ಹತ್ತು ಹಲವಾರು ವಾಣಿಜ್ಯ ಚಟುವಟಿಕೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಇದು ಸಾಧ್ಯವಾಗಿದೆ, ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಬ್ಯಾಂಕರ್ಸ್‍ಗಳಿಗೆ ಅಭಿನಂದನೆ ಸಲ್ಲಬೇಕೆಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದ ಎಜಿಎಂ ಪಿ. ಬಿಸ್ವಾಸ್, ನಬಾರ್ಡ್‍ನ ಡಿಡಿಎಂ ಸಂಗೀತಾ ಎಸ್ ಕರ್ತ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀನ್ ಎಂ.ಪಿ. ವೇದಿಕೆಯಲ್ಲಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಸಿದ್ದಪಡಿಸಲಾಗದ ಸರ್ಕಾರಿ ಸೌಲಭ್ಯಗಳ ಮಾಹಿತಿಯುಳ್ಳ ಗ್ಲಿಂಪ್ಸ್ ಆಫ್ ಗೌರ್ವಮೆಂಟ್ ಸ್ಪಾನರ್ಸಡ್ ಸ್ಕಿಮ್ಸ್ ಎಂಬ ಹೊತ್ತಿಗೆಯನ್ನು ಸಂಸದರು ಬಿಡುಗಡೆ ಮಾಡಿದರು.

ಇದೇ ವೇಳೆ ನಬಾರ್ಡ್‍ನ 2023-24ನೇ ಸಾಲಿನ ಪೋಟೆಷಿಯಲ್ ಲಿಂಕ್ಡ್ ಕ್ರಡಿಟ್ ಪ್ಲಾನ್ (ಪಿಎಲ್‍ಪಿ) ಪುಸ್ತಕವನ್ನು ಅನಾವರಣಗೊಳಿಸಲಾಯಿತು.

ಪಿಎಂಇಜಿಪಿ (ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ) ಯೋಜನೆಯ ಅನುಷ್ಠಾನದಲ್ಲಿ 2021-22ನೇ ಸಾಲಿನಲ್ಲಿ ಜಿಲ್ಲೆ ರಾಜ್ಯದಲ್ಲಿ ತೃತೀಯ ಸ್ಥಾನ ಪಡೆದಿದೆ, ಆ ಆರ್ಥಿಕ ವರ್ಷದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಲ ನೀಡಿದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಮುಖರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.


Spread the love