ಜಿಲ್ಲಾ ಉತ್ಸವವಾಗಿ ಅಬ್ಬಕ್ಕ ಉತ್ಸವವಾಗಿ ಮಾಡಲಾಗುವುದು: ಸಚಿವೆ ಉಮಾಶ್ರೀ

Spread the love

ಮಂಗಳೂರು: ಅಬ್ಬಕ್ಕ ಉತ್ಸವನ್ನು ಜಿಲ್ಲಾ ಉತ್ಸವವಾಗಿ ಆಚರಿಸಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದ್ದಾರೆ.

SONY DSC

ಅವರು ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 19ನೇ ಫೆಡರೇಷನ್ ಕಪ್ ರಾಷ್ಟ್ರೀಯ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2015 ಕ್ರೀಡಾಕೂಟಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ರಂಗ ಮಂದಿರ ನಿರ್ಮಾಣದ ಪ್ರಸ್ತಾವನೆ ಬಂದಿದ್ದು ಪರಿಶೀಲಿಸಲಾಗುವುದು. ಇದಕ್ಕಾಗಿ ರಾಷ್ಟ್ರೀಯ ನಾಟಕ ಶಾಲೆಯಿಂದ ರಂಗ ಮಂದಿರ ನಿರ್ಮಾಣಕ್ಕೆ ಅನುದಾನ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೇ 19ನೇ ಫೆಡರೇಷನ್ ಕಪ್ ರಾಷ್ಟ್ರೀಯ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಕ್ರೀಡಾಕೂಟಕ್ಕೆ ಇಲಾಖೆ ವತಿಯಿಂದ 20 ಲಕ್ಷ ನೀಡಲಾಗುವುದು ಎಂದು ತಿಳಿಸಿದ್ದಾರೆ.


Spread the love