ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಗೆ ರಾಜ್ಯ ಸರಕಾರ ನಿರ್ಧಾರ : ಯಶ್ ಪಾಲ್ ಸುವರ್ಣ ಸ್ವಾಗತ

Spread the love

ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಗೆ ರಾಜ್ಯ ಸರಕಾರ ನಿರ್ಧಾರ : ಯಶ್ ಪಾಲ್ ಸುವರ್ಣ ಸ್ವಾಗತ

ಉಡುಪಿ: ರಾಜ್ಯದಾದ್ಯಂತ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನ ಒದಗಿಸಿದ ರಾಜ್ಯ ಸರಕಾರದ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಯಶ್ ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ಗೋಸಂಪತ್ತಿನ ರಕ್ಷಣೆಗಾಗಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಅಧಿನಿಯಮ ಜಾರಿಗೊಳಿಸಿರುವ ರಾಜ್ಯ ಸರಕಾರ, ಇದೀಗ ಪ್ರತಿ ಜಿಲ್ಲೆಗೊಂದರಂತೆ ಗೋಶಾಲೆಗಳನ್ನು ಸ್ಥಾಪಿಸುವ ಮೂಲಕ ಗೋ ರಕ್ಷಣೆ ಕೇವಲ ಮಾತಲ್ಲ ಅದು ನಮ್ಮ ಸಂಕಲ್ಪ ಎಂಬ ಬದ್ಧತೆಯನ್ನು ನಿರೂಪಿಸಿದೆ.

ಗೋ ಶಾಲೆಗಳ ನಿರ್ಮಾಣಕ್ಕೆ ರಾಜ್ಯದಾದ್ಯಂತ ನಿವೇಶನಗಳನ್ನು ಗುರುತಿಸಿರುವ ಪಶು ಸಂಗೋಪಾನ ಇಲಾಖೆ ಶೀಘ್ರವಾಗಿ ಗೋಶಾಲೆ ನಿರ್ಮಾಣಕ್ಕೆ ಮುಂದಾಗಲಿ ಹಾಗೂ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ  ನಳಿನ್ ಕುಮಾರ್ ಕಟೀಲ್, ಪಶು ಸಂಗೋಪನೆ ಇಲಾಖೆ ಸಚಿವರಾದ  ಪ್ರಭು ಬಿ ಚೌಹಾಣ್ ಹಾಗೂ ಸಚಿವ ಸಂಪುಟದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love