ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಿದರೆ ಮಾತ್ರ ಹಿಂದೂ ಕಾರ್ಯಕರ್ತರ ರಕ್ಷಣೆ ಸಾಧ್ಯ : ಯಶ್ ಪಾಲ್ ಸುವರ್ಣ

Spread the love

ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಿದರೆ ಮಾತ್ರ ಹಿಂದೂ ಕಾರ್ಯಕರ್ತರ ರಕ್ಷಣೆ ಸಾಧ್ಯ : ಯಶ್ ಪಾಲ್ ಸುವರ್ಣ

ಉಡುಪಿ: ನಿರಂತರವಾಗಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಯಲ್ಲಿ ತೊಡಗಿರುವ ಮತಾಂಧ ಜಿಹಾದಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡುವ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಆಡಳಿತದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರು ನಮ್ಮದೇ ಪಕ್ಷದ ಸರಕಾರದಲ್ಲೂ ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ.

ಈ ಬರ್ಬರ ಹತ್ಯೆಯಿಂದ ಮಾನಸಿಕವಾಗಿ ಹಿಂದೂ ಕಾರ್ಯಕರ್ತರ ಸ್ಥೈರ್ಯವನ್ನು ಕುಗ್ಗಿಸುವ ಹುನ್ನಾರದ ಭಾಗವಾಗಿ ಹತ್ಯೆಗಳು ನಡೆಯುತ್ತಿದ್ದು, ಪ್ರತಿಬಾರಿ ಈ ರೀತಿಯ ಹತ್ಯೆ ನಡೆದಾಗ ಕೇವಲ ಸಾಮಾಜಿಕ ಜಾಲತಾಣದಲ್ಲಿ ಸಾಂತ್ವನ, ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆಗೆ ಸೀಮಿತವಾಗದೇ ಹಂತಕರಿಗೆ ಇನ್ನೆಂದೂ ಈ ರೀತಿಯ ಕೃತ್ಯ ನಡೆಸದಂತೆ ಅವರದೇ ಭಾಷೆಯಲ್ಲಿ ತಕ್ಕ ಉತ್ತರ ನೀಡಬೇಕಾಗಿದೆ.

ಕರಾವಳಿ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಹಿಜಾಬ್ ವಿವಾದದಿಂದ ಆರಂಭಗೊಂಡು ನಡೆದ ಹಲವು ಘಟನೆಯಲ್ಲಿ ಸಮಾಜಘಾತಕ ಶಕ್ತಿಗಳನ್ನು ಗಟ್ಟಿಯಾಗಿ ಖಂಡಿಸಿದ ಶಿವಮೊಗ್ಗದ ಹರ್ಷ, ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಹತ್ಯೆ ಹಾಗೂ ಹಿಂದೂ ಕಾರ್ಯಕರ್ತರಿಗೆ ನಿರಂತರ ಬೆದರಿಕೆ ಪ್ರಕರಣಗಳನ್ನು ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಿ ಈ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿರುವ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಯನ್ನು ನಿಷೇಧಿಸುವಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸುತ್ತಿದ್ದು ಸರಕಾರ ಈ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಂಡು ಹಿಂದೂ ಕಾರ್ಯಕರ್ತರಲ್ಲಿ ಭರವಸೆ ಮೂಡಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ


Spread the love

Leave a Reply

Please enter your comment!
Please enter your name here