ಜುಲೈ 22: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಮಹಾಸ್ಪೋಟ-  281 ಮಂದಿಗೆ  ಪಾಸಿಟಿವ್ ದೃಢ

Spread the love

ಜುಲೈ 22: ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಮಹಾಸ್ಪೋಟ-  281 ಮಂದಿಗೆ  ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೊರೋನಾ ಸ್ಪೋಟ ಸಂಭವಿಸಿದ್ದು , ಒಟ್ಟು 281 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2686ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೂ 1765 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 910 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. , ಇದುವರೆಗೂ 11 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಬುಧವಾರ 402 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸ ಲಾಗಿದೆ. 467 ವರದಿಗಳು ಬರುವುದು ಬಾಕಿ ಇದೆ. ಶೀತಜ್ವರ, ತೀವ್ರ ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡುಬಂದ 28 ಜನರನ್ನು ಐಸೊಲೇಷನ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love