ಜುಲೈ 26: ಉಡುಪಿ ಜಿಲ್ಲೆಯಲ್ಲಿ ಮತ್ತೆ 170 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಜುಲೈ 26: ಉಡುಪಿ ಜಿಲ್ಲೆಯಲ್ಲಿ ಮತ್ತೆ 170 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ, ಒಟ್ಟು 170 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3388 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 912 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಭಾನುವಾರ 706 ವರದಿಗಳು ನೆಗೆಟಿವ್ ಬಂದಿದ್ದು, 170 ಪಾಸಿಟಿವ್ ಬಂದಿವೆ. 564 ವರದಿಗಳು ಬರುವುದು ಬಾಕಿ ಇದೆ.
ಸೋಂಕಿನ ಲಕ್ಷಣಗಳು ಕಂಡುಬಂದ 34 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2133 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1241 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ.


Spread the love