ಜುಲೈ 4: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ

Spread the love

ಜುಲೈ 4: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ

ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರು ಮತ್ತು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 4 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಉಡುಪಿ ಬನ್ನಂಜೆ ಶ್ರೀ ನಾರಾಯಣ ಗುರು ಅಡಿಟೋರಿಯಂನಲ್ಲಿ ಜರುಗಲಿದೆ ಎಂದು ಅಧ್ಯಕ್ಷರಾದ ಜ್ಯೋತಿ ಹೆಬ್ಬಾರ್ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸಮಾರಂಭದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಸೌಮ್ಯಾ ರೆಡ್ಡಿ ಮತ್ತು ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ ಅವರು ಭಾಗವಹಿಸಲಿರುವರು. ಅಲ್ಲದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾ. ಮಂಜುನಾಥ ಭಂಡಾರಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವಾನ್ ಡಿಸೋಜ, ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದರಾದ ಶ್ರೀ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಕೆ.ಗೋಪಾಲ್ ಪೂಜಾರಿ, ಎಂ.ಎ. ಗಫೂರ್, ನಾಯಕರುಗಳಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯ ಶೆಟ್ಟಿ, ರಮೇಶ್ ಕಾಂಚನ್ ಮುಂತಾದ ನಾಯಕರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ನಾಯಕಿಯರಾದ ವೆರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್ ರಾಜ್ ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments