ಜುಲೈ 6: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಉಡುಪಿ ಜಿಲ್ಲಾ ಪ್ರವಾಸ

Spread the love

ಜುಲೈ 6: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಉಡುಪಿ ಜಿಲ್ಲಾ ಪ್ರವಾಸ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ಜುಲೈ 6ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಅವರು ಜುಲೈ 6ರಂದು ಬೆಳಿಗ್ಗೆ ಗಂಟೆ 10.15ಕ್ಕೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳ ವೀಕ್ಷಣೆ ಮಾಡಿ ನಂತರ 11.00 ಗಂಟೆಗೆ ಮಲ್ಪೆಯಲ್ಲಿ ನಡೆಯುವ ಉಡುಪಿ ಜಿಲ್ಲಾ ಮೀನುಗಾರ ಸಮಾಜದ ಕುಂದುಕೊರತೆಗಳ ಅಧ್ಯಯನ ಸಭೆಯಲ್ಲಿ ಭಾಗವಹಿಸಲಿರುವರು.

ಮಧ್ಯಾಹ್ನ 4.00 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಕೋವಿಡ್ ಸಹಾಯ ಹಸ್ತದ ಬಗ್ಗೆ ನಡೆಯುವ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಕುಂದಾಪುರಕ್ಕೆ ತೆರಳಿ ವಾಸ್ತವ್ಯ ಹೂಡುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love