ಜುಲೈ 6 ರಂದು ಉಡುಪಿ ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ವಿವರ

Spread the love

ಜುಲೈ 6 ರಂದು ಉಡುಪಿ ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ವಿವರ

ಉಡುಪಿ: ಜಿಲ್ಲೆಯಲ್ಲಿ ಜುಲೈ 6 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 2 ನೇ ಡೋಸ್ ಕೋವಿಶೀಲ್ಡ್ -100 ಡೋಸ್ ಹಾಗೂ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 15 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ 150 ಡೋಸ್ ಲಭ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2 ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಹಾಗೂ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love