ಜುಲೈ 8: ಪಡುಬಿದ್ರೆ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಹೆಬ್ಬಾಳ್ಕರ್ ಭೇಟಿ

Spread the love

ಜುಲೈ 8: ಪಡುಬಿದ್ರೆ ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಹೆಬ್ಬಾಳ್ಕರ್ ಭೇಟಿ

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜುಲೈ 8 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿಲಿದ್ದಾರೆ.

ಶನಿವಾರ ಮಧ್ಯಾಹ್ನ ಬೆಂಗಳೂರಿನಿಂದ 12 ಗಂಟೆಗೆ ಪಡುಬಿದ್ರೆಗೆ ಆಗಮಿಸಿ ಕಡಲ್ಕೊರೆತದಿಂದ ಹಾನಿಯಾಗಿರುವರ ಪ್ರದೇಶಗಳಿಗೆ ಭೇಟಿ ನೀಡಿಲಿದ್ದು ಬಳಿಕ ಮಧ್ಯಾನ್ಹ 3 ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಪ್ರತಿಭಾ ಪುರಸ್ಕಾರ -2023 ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಸಂಕೀರ್ಣದಲ್ಲಿ ಜಿಲ್ಲೆಯಲ್ಲಿ ಅತೀವೃಷ್ಠಿಯಾಗುತ್ತಿದ್ದು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸುವ ಸಲುವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ಕಾರ್ಯಪಡೆಯೊಂದಿಗೆ ಸಭೆ ನಡೆಸಿ ಬಳಿಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.


Spread the love