ಜು. 11: ವಿಸ್ಟಾ ಡೋಮ್ ರೈಲು ಸಂಚಾರಕ್ಕೆ ಹಸಿರು ನಿಶಾನೆ

Spread the love

ಜು. 11: ವಿಸ್ಟಾ ಡೋಮ್ ರೈಲು ಸಂಚಾರಕ್ಕೆ ಹಸಿರು ನಿಶಾನೆ

ಮಂಗಳೂರು: ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಹಗಲಿನಲ್ಲಿ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಇದೇ ಜು. 11ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸುವರು. ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

ವಿಸ್ಟಾಡೋಮ್ ಬೋಗಿಗಳ್ಳುಳ್ಳ ರೈಲು ದಕ್ಷಿಣ ಭಾರತದಲ್ಲಿ ರೈಲ್ವೆ ಇಲಾಖೆಯಿಂದ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ.

ಗಣ್ಯರು ರೈಲು ಸಂಖ್ಯೆ 06540/06539 ಮಂಗಳೂರು ಜೆಎನ್ – ಯಶವಂತಪುರ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಮಂಗಳೂರು ಜಂಕ್ಷನ್ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಚಲಿಸುವ ಈ ಎಕ್ಸ್ಪ್ರೆಸ್ ರೈಲಿಗೆ ಅಳವಡಿಸಲಾದ ವಿಸ್ಟಾಡೋಮ್ ಬೋಗಿಗಳು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಎತ್ತರದ ಪರ್ವತಗಳ ಅದ್ಭುತ ನೋಟ, ಕಣಿವೆಗಳು, ಆಳವಾದ ಕಮರಿಗಳು ಮತ್ತು ಹಚ್ಚ ಹಸಿರಿನ ಈ ಪ್ರದೇಶವು ಮಾನ್ಸೂನ್ನಲ್ಲಿ ಇನ್ನಷ್ಟು ಸುಂದರ ದೃಶ್ಯಾವಳಿಗಳು ನೋಡುಗರನ್ನು ಬೆರಗುಗೊಳಿಸುತ್ತದೆ.

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮಥ್ರ್ಯ ಹೊಂದಿದೆ, ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ.

ಕೋಚ್ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್ ಗಳಿವೆ. ಇದಲ್ಲದೆ, ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.


Spread the love