ಜು. 15: ಉಡುಪಿ ಬ್ಲಾಕ್ ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ವಿವಿಧೆಡೆ ಪ್ರತಿಭಟನೆ

Spread the love

ಜು. 15: ಉಡುಪಿ ಬ್ಲಾಕ್ ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ವಿವಿಧೆಡೆ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಅಪಪ್ರಚಾರದ ವಿರುದ್ಧ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ಸಿನ ವತಿಯಿಂದ ಜುಲೈ 15 ಮಂಗಳವಾರದಂದು ವಿವಿಧ ಗ್ರಾಮ ಪಂಚಾಯತ್ ಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ಕಡೆಕಾರ್ ಗ್ರಾಮ ಪಂಚಾಯತ್, ಬೆಳಿಗ್ಗೆ 11.30ಕ್ಕೆ ಅಂಬಲಪಾಡಿ ಗ್ರಾಮ ಪಂಚಾಯತ್ ಮಧ್ಯಾಹ್ನ 12.30ಕ್ಕೆ ಬಡಾನಿಡಿಯೂರು ಗ್ರಾಮ ಪಂಚಾಯತ್, ಮಧ್ಯಾಹ್ನ 2.30ಕ್ಕೆ ತೆಂಕನಿಡಿಯೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments