ಜು.5ರಿಂದ ಕೋವಿಡ್ ನಿಯಮ ಪಾಲನೆಯೊಂದಿಗೆ ಮಸೀದಿ ಮತ್ತು ಚರ್ಚುಗಳಲ್ಲಿ ಪ್ರಾರ್ಥನೆಗೆ ಅವಕಾಶ: ಉಡುಪಿ ಡಿಸಿ ಜಿ ಜಗದೀಶ್

Spread the love

ಜು.5ರಿಂದ ಕೋವಿಡ್ ನಿಯಮ ಪಾಲನೆಯೊಂದಿಗೆ ಮಸೀದಿ ಮತ್ತು ಚರ್ಚುಗಳಲ್ಲಿ ಪ್ರಾರ್ಥನೆಗೆ ಅವಕಾಶ: ಉಡುಪಿ ಡಿಸಿ ಜಿ ಜಗದೀಶ್

ಉಡುಪಿ: ರಾಜ್ಯ ಸರಕಾರದ ಆದೇಶದಂತೆ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಉಡುಪಿ ಜಿಲ್ಲೆಯ ಮಸೀದಿ ಮತ್ತು ಚರ್ಚುಗಳಲ್ಲಿ ಜುಲೈ 5 ರಿಂದ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌ ತಿಳಿಸಿದ್ದಾರೆ.

ಈ ಕುರಿತು ಮ್ಯಾಂಗಲೋರಿಯನ್‌ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರ ಜುಲೈ 5ರಿಂದ ಧಾರ್ಮಿಕ ಸ್ಥಳಗಳನ್ನು ಭಕ್ತರಿಗೆ ತೆರೆಯಲು ಅವಕಾಶ ಕಲ್ಪಿಸಿದ್ದು, ಸರಕಾರದ ಆದೇಶದಂತೆ ಕಡ್ಡಾಯವಾಗಿ ಮಾಸ್ಕ್‌ ಧರಿಸುವುದರೊಂದಿಗೆ ಸುರಕ್ಷಿತವಾದ ಸಾಮಾಜಿಕ ಅಂತರ ಕಾಪಾಡಿಕೊಂಡು ಮಸೀದಿಗಳಲ್ಲಿ ಸಾಮೂಹಿಕ ನಮಾಝ್‌ ಮತ್ತು ಚರ್ಚುಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


Spread the love