ಜು.7-8: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

Spread the love

ಜು.7-8: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಜು.7ರ ಶುಕ್ರವಾರ ರಾತ್ರಿ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸಿ, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಿ ಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡುವರು.

ಜು.8ರ ಶನಿವಾರ ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 10ಗಂಟೆಗೆ ಕನ್ಯಾಡಿ ರಾಮ ಮಂದಿರಕ್ಕೆ ಭೇಟಿ ನೀಡಿ ನಂತರ 11 ಗಂಟೆಗೆ ಉಜಿರೆಯ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 29ನೇ ಪದವಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಬೆಳ್ತಂಗಡಿಯ ಪ್ರಸನ್ನ ಎಜುಕೇಶನ್ ಟ್ರಸ್ಟ್ ಗೆ ಭೇಟಿ ನೀಡಿ ನಂತರ 2.15ಕ್ಕೆ ಬೆಳ್ತಂಗಡಿ ತಾಲೂಕು ಮಟ್ಟದ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ 3.30ಕ್ಕೆ ಬೆಳ್ತಂಗಡಿಯ ಸಂಗಮ್ ಹಾಲ್ ನಲ್ಲಿ ಜನತಾ ದರ್ಶನದಲ್ಲಿ ಭಾಗಿಯಾಗುವರು. ರಾತ್ರಿ 9.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 10.45ಕ್ಕೆ ಬೆಂಗಳೂರು ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love