ಜೂನ್ 12 ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಲಭ್ಯತೆ ವಿವರ

Spread the love

ಜೂನ್ 12 ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಲಭ್ಯತೆ ವಿವರ

೧. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.

೨. ಉಡುಪಿ ನಗರ ಪ್ರದೇಶದಲ್ಲಿ ದಿನಾಂಕ ೧೨/೦೬/೨೦೨೧ ರಂದು ೪೫ ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ಇರುವುದಿಲ್ಲ.

೩. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ): ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-೧ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ನೀಡಲಾಗುವುದು(೨೩೦ ಡೋಸ್) ಮತ್ತು ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು ೪ ವಾರ (೨೮ ದಿನ) ಮೀರಿದವರಿಗೆ ಕೋವ್ಯಾಕ್ಸಿನ್ ೨ನೇ ಡೋಸ್ ನೀಡಲಾಗುವುದು (೨೫೦ ಡೋಸ್).

೪. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ): ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-೧ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ನೀಡಲಾಗುವುದು(೮೦ ಡೋಸ್) ಮತ್ತು ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು ೪ ವಾರ (೨೮ ದಿನ) ಮೀರಿದವರಿಗೆ ಕೋವ್ಯಾಕ್ಸಿನ್ ೨ನೇ ಡೋಸ್ ನೀಡಲಾಗುವುದು (೮೦ ಡೋಸ್).

೫. ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ: ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-೧ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ ಕೋವಿಶೀಲ್ಡ್ ಪ್ರಥಮ ಡೋಸ್ ನೀಡಲಾಗುವುದು(೭೦ ಡೋಸ್) ಮತ್ತು ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು ೪ ವಾರ (೨೮ ದಿನ) ಮೀರಿದವರಿಗೆ ಕೋವ್ಯಾಕ್ಸಿನ್ ೨ನೇ ಡೋಸ್ ನೀಡಲಾಗುವುದು (೧೫೦ ಡೋಸ್).

೬. ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ): ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು ೪ ವಾರ (೨೮ ದಿನ) ಮೀರಿದವರಿಗೆ ಕೋವ್ಯಾಕ್ಸಿನ್ ೨ನೇ ಡೋಸ್ ನೀಡಲಾಗುವುದು (೨೦೦ ಡೋಸ್).

೭. ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ):ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು ೪ ವಾರ (೨೮ ದಿನ) ಮೀರಿದವರಿಗೆ ಕೋವ್ಯಾಕ್ಸಿನ್ ೨ನೇ ಡೋಸ್ ನೀಡಲಾಗುವುದು (೧೦೦ ಡೋಸ್).

೮. ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-೧ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು ೪೫ ವರ್ಷ ಮೇಲ್ಪಟ್ಟ ಸಾರ್ವಜನಿಕರು/ (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು ೮೪ ದಿನಗಳು ಮೀರಿದವರು ೨ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು ೪ ವಾರ (೨೮ ದಿನ) ಮೀರಿದವರು ಕೋವ್ಯಾಕ್ಸಿನ್ ೨ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ ೧೨.೦೬.೨೦೨೧ ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.


Spread the love

Leave a Reply

Please enter your comment!
Please enter your name here