ಜೂ.1ರಿಂದ ದ.ಕ. ಜಿಲ್ಲೆಯಲ್ಲಿ ಮೀನುಗಾರಿಕೆ ನಿಷೇಧ

Spread the love

ಜೂ.1ರಿಂದ ದ.ಕ. ಜಿಲ್ಲೆಯಲ್ಲಿ ಮೀನುಗಾರಿಕೆ ನಿಷೇಧ
 

ಮಂಗಳೂರು: ದ.ಕ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ (61 ದಿನಗಳ ಕಾಲ) ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಈ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ- 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವರು. ಅಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಹಾಗಾಗಿ ಕರಾವಳಿಯ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here