ಜೂ. 11 : ಉಡುಪಿ ಜಿಲ್ಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರವಾಸ

Spread the love

ಜೂ. 11 : ಉಡುಪಿ ಜಿಲ್ಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರವಾಸ

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ ಕರ್ ಅವರು ಜೂನ್ 11 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 10.15 ಕ್ಕೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವರು. ಬಳಿಕ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ 12 ಗಂಟೆಗೆ ಬನ್ನಂಜೆ ಡಾ|ವಿಎಸ್ ಆಚಾರ್ಯ ಸರಕಾರಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 7 ಗಂಟೆಗೆ ಉಡುಪಿಯಿಂದ ನಿರ್ಗಮಿಸಲಿದ್ದಾರೆ.


Spread the love