ಜೂ.11: ದಕ , ಉಡುಪಿ ಜಿಲ್ಲೆಯಲ್ಲಿ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ‘ಶಕ್ತಿ ಯೋಜನೆ’ಗೆ ಚಾಲನೆ

Spread the love

ಜೂ.11: ದಕ , ಉಡುಪಿ ಜಿಲ್ಲೆಯಲ್ಲಿ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ‘ಶಕ್ತಿ ಯೋಜನೆ’ಗೆ ಚಾಲನೆ

ಉಡುಪಿ: ರಾಜ್ಯ ಸರ್ಕಾರವು , ರಾಜ್ಯದ ಎಲ್ಲಾ ಮಹಿಳೆಯರಿಗೆ (ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಮತ್ತು ತೃತೀಯ ಲಿಂಗಿಗಳು) ಒಳಗೊಂಡಿರುವ0ತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ, ಸಾಮಾನ್ಯ ಸಾರಿಗೆ ಹಾಗೂ ವೇಗದೂತ ಬಸ್ಸುಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು “ಶಕ್ತಿ ಯೋಜನೆ” ಯಡಿ ರೂಪಿಸಿದ್ದು, ಮುಖ್ಯ ಮಂತ್ರಿಯವರು ಜೂನ್ 11 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧ ಬೆಂಗಳೂರಿನಲ್ಲಿ ಶಕ್ತಿ ಯೋಜನೆಯನ್ನು ಲೋಕಾರ್ಪಣೆಗೊಳಿಸುತ್ತಿದ್ದಾರೆ.

ಸದರಿ ಯೋಜನೆಯನ್ನು ಜಿಲ್ಲೆ/ತಾಲೂಕುಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ನಿಗಮದ ಮಂಗಳೂರು ಬಸ್ಸು ನಿಲ್ದಾಣ ಹಾಗೂ ಉಡುಪಿ ಜಿಲ್ಲೆಯ ನಿಗಮದ ಡಾ|| ವಿ ಎಸ್ ಆಚಾರ್ಯ ಬಸ್ಸು ನಿಲ್ದಾಣ, ಬನ್ನಂಜೆ ಉಡುಪಿ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಬರುವ ನಿಗಮದ ಕುಂದಾಪುರ ಬಸ್ಸು ನಿಲ್ದಾಣಗಳಲ್ಲಿ ಜೂನ್ 11 ರಂದು ಮಧ್ಯಾಹ್ನ 12:30 ಗಂಟೆಗೆ ಸದರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.

ಜಿಲ್ಲಾ ಮಟ್ಟದಲ್ಲಿ ಜರಗುವ ಸದರಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಲಿದ್ದು, ಸ್ಥಳೀಯ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು ಚುನಾಯಿತ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ತಾಲೂಕು ಮಟ್ಟದಲ್ಲಿ ಜರಗುವ ಸದರಿ ಕಾರ್ಯಕ್ರಮದಲ್ಲಿ ಸ್ಥಳೀಯ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು ಚುನಾಯಿತ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕ.ರಾ.ರ.ಸಾ.ನಿ.ಮಂಗಳೂರು ವಿಭಾಗದ ಪ್ರಕಟಣೆ ತಿಳಿಸಿದೆ.


Spread the love