ಜೂ.22ರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭ

Spread the love

ಜೂ.22ರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್-19 ಲಾಕ್ಡೌ ನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತಾದರೂ ಇದೀಗ. ಕೋವಿಡ್-19 ಲಾಕ್ಡೌಟನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 22 ರಿಂದ ಸಂಚಾರ ಆರಂಭಿಸಲಾಗುತ್ತಿದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ರಷ್ಟು ಆಸನ ಸಾಮರ್ಥ್ಯ ದೊಂದಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸಡೆಸಲಾಗುತ್ತಿದೆ. ಆಂಧ್ರಪ್ರದೇಶ ರಾಜ್ಯಕ್ಕೆ ಬೆಳಗ್ಗೆ 06. ಗಂಟೆಯಿಂದ ಸಾಯಂಕಾಲ 6. ಗಂಟೆಯೊಳಗೆ ತಲುಪುವಂತೆ ಸಂಚಾರ ವ್ಯವಸ್ಥೆ ಮಾಡಲಾಗುತ್ತಿದೆ.

ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿರುತ್ತದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಲು ಕೋರಲಾಗಿದೆ.

ಮುಂಗಡ ಆಸನಗಳನ್ನು ksrtc.karnataka.gov.in/www.ksrtc.in ವೆಬ್ಸೈುಟ್ ಮತ್ತು ನಿಗಮದ, ಫ್ರಾಂಚೈಸಿ ಕೌಂಟರ್ ಗಳ ಮುಖಾಂತರ ಕಾಯ್ದಿರಿಸಿ ಕೊಳ್ಳ ಬಹುದಾಗಿದೆ.

ಹೆಚ್ಚುವರಿ ಮಾಹಿತಿಗಾಗಿ ಕರಾರಸಾ ನಿಗಮದ ಕಾಲ್ ಸೆಂಟರ್ ದೂರವಾಣಿ ಸಂಖ್ಯೆ 080-26252625 ಸಂಪರ್ಕಿಸಬಹುದಾಗಿದೆ.


Spread the love