ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವ

Spread the love

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವ

ಮೈಸೂರು: ಜೆಎಸ್‌ಎಸ್ ಮಹಾವಿದ್ಯಾಪೀಠದ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಸತತವಾಗಿ 9ನೇ ಬಾರಿ ವಿಶೇಷವಾಗಿ ಭಾರತ ದೇಶದ ಪ್ರಾಂತೀಯ ಮೇಳವಾದ ಗುಜರಾತ್ ಕರಕುಶಲ ಉತ್ಸವ- ಮೇ.19 ರಿಂದ 28ರವರೆಗೆ ನಡೆಯಲಿದೆ.

ಈ ಬಾರಿಯ ಮೇಳವು ಹಿಂದಿನ ಮೇಳಗಳಿಗಿಂತ ವಿಭಿನ್ನವಾಗಿರಲಿದ್ದು, ಗುಜರಾತ್ ರಾಜ್ಯದ ವಿವಿಧ ಭಾಗಗಳ ಪ್ರಸಿದ್ಧ ಹಾಗೂ ಕ್ರೀಯಾಶೀಲರಾಗಿರುವ ಸುಮಾರು 80ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸಲಿದ್ದಾರೆ.

ಕುಶಲಕರ್ಮಿಗಳು ತಯಾರಿಸಿದ ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್ ಶೀಟ್‌ಗಳು, ಟವಲ್‌ಗಳು, ಕುಶನ್ ಕವರ್‌ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್‌ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಬೀಡ್ ವರ್ಕ್, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ.

ಮೇಳದ ವಿಶೇಷ ಎಂದರೆ ತಯಾರಕರಿಂದಲೇ ನೇರವಾಗಿ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಒದಗಿಸುವ ಪ್ರಯತ್ನವನ್ನು ಗುಜರಾತ್ ಸರ್ಕಾರ ಮಾಡುತ್ತಿದೆ. ಈ ಕಾರಣದಿಂದಾಗಿ ಮೈಸೂರು ಹಾಗೂ ಸುತ್ತಮುತ್ತಲಿನ ಗ್ರಾಹಕರಿಗೆ ಗುಜರಾತ್ ಸಂಸ್ಕೃತಿಯ ಉಡುಗೆ-ತೊಡುಗೆಗಳು ಮತ್ತು ಅಲಂಕಾರಿಕ ವಸ್ತುಗಳು ನೇರವಾಗಿ, ಉತ್ತಮ ಗುಣಮಟ್ಟದಲ್ಲಿ, ಕಡಿಮೆ ಬೆಲೆಗೆ ದೊರೆಯಲಿದೆ.

ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಕಾರ್ಪೋರೇಟ್ ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಸಕ್ತಿಯುಳ್ಳವರಿಗೆ ಗುಜರಾತಿನ ಪಾರಂಪರಿಕ ಕಲೆಯ ಬಗ್ಗೆ ತರಬೇತಿಯನ್ನು ಗುಜರಾತಿನ ಕುಶಲಕರ್ಮಿಗಳು ಈ ಮೇಳದ ಸಂದರ್ಭದಲ್ಲಿ ಉಚಿತವಾಗಿ ನೀಡಲಿದ್ದಾರೆ. ಶಾಲಾ ಮಕ್ಕಳಿಗೆ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತದೆ.

.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೈಸೂರು ನಗರ ಬಸ್ ನಿಲ್ದಾಣದಿಂದ ಪ್ರತಿ ನಿತ್ಯ ಬಸ್ ನಂ.117/1ರ ಸಾರಿಗೆ ಬಸ್ಸುಗಳು ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ಗೆ ಸಂಚರಿಸಲಿದೆ.


Spread the love

Leave a Reply

Please enter your comment!
Please enter your name here