ಜೆಡಿಎಸ್ ನಲ್ಲಿ ಶೇ.30ರಷ್ಟು ಯುವಕರಿಗೆ ಸೀಟು:ನಿಖಿಲ್ ಕುಮಾರಸ್ವಾಮಿ

Spread the love

ಜೆಡಿಎಸ್ ನಲ್ಲಿ ಶೇ.30ರಷ್ಟು ಯುವಕರಿಗೆ ಸೀಟು:ನಿಖಿಲ್ ಕುಮಾರಸ್ವಾಮಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಶೇ.30ರಷ್ಟು ಟಿಕೆಟ್‌ಗಳನ್ನು ಯುವಜನರಿಗೆ ನೀಡುವಂತೆ ಒತ್ತಾಯಿಸಿದ್ದೇನೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಪಕ್ಷದಿಂದ ನಡೆದ ಸಮಾಲೋಚನಾ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಯುವಕರು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯಕ್ಕೆ ಬರಬೇಕು. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಗೆಲ್ಲುವ ಅರ್ಹತೆ ಇರುವ ಯುವ ನಾಯಕರು ಟಿಕೆಟ್ ಕೇಳಬೇಕು. ಈ ನಿಟ್ಟಿನಲ್ಲಿ ನಾವೂ ಸಮೀಕ್ಷೆ ಮಾಡಿಸುತ್ತಿದ್ದೇವೆ. ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕೆಟ್ ಕೊಡುತ್ತೇವೆ ಎಂದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬದವರಿಗೆ ಸಂಸದೆ ಸುಮಲತಾ ವಿಳಂಬವಾಗಿ ಭೇಟಿಯಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಂಸದರು ಘಟನೆ ನಡೆದಂದೇ ಆ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಬೇಕಿತ್ತು. ಆದರೆ, ನಾಲ್ಕು ದಿನಗಳ ಬಳಿಕ ಬೇರಾವುದೋ ಕಾರ್ಯಕ್ರಮಕ್ಕೆ ಹೋದಾಗ ಮಳವಳ್ಳಿಗೆ ಭೇಟಿ ನೀಡಿದ್ದಾರೆ. ಅವರಿಗೂ ಮೊದಲೇ ಕ್ಷೇತ್ರದ ಜೆಡಿಎಸ್ ಶಾಸಕ ಅನ್ನದಾನಿ ಹಾಗೂ ನಾನು ಆ ಕುಟುಂಬದವರ ಮನೆಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಆ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲೂ ಶಾಸಕರು ಶ್ರಮಿಸಿದ್ದಾರೆ ಎಂದು ಹೇಳಿದರು.


Spread the love