ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ

Spread the love

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಈ ಬಗ್ಗೆ ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು (ಏಪ್ರಿಲ್ 29) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಿಂದ ಪ್ರಜ್ವಲ್ರನ್ನು ಉಚ್ಚಾಟಿಸಲಾಗಿದೆ. ಯಾರು ಎಲ್ಲಿ ಹೋಗುತ್ತಾರೆ ಎಂದು ಕಾಯಲು ಆಗುತ್ತಾ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ನಾವೇ ಹೇಳುತ್ತಿದ್ದೇವಲ್ಲಾ, ಸಮಗ್ರ ತನಿಖೆ ಆಗಬೇಕೆಂದು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ. ನನ್ನ, ನನ್ನ ತಂದೆ ಬಗ್ಗೆ ಸಂಶಯ ಪಡಬೇಡಿ ಎಂದು ಸ್ಪಷ್ಟಪಡಿಸಿದರು.


Spread the love

Leave a Reply