ಜೆಡಿಎಸ್ ಪಂಚರಥಯಾತ್ರೆಗೆ ಸಮಾಲೋಚನಾ ಸಭೆ

Spread the love

ಜೆಡಿಎಸ್ ಪಂಚರಥಯಾತ್ರೆಗೆ ಸಮಾಲೋಚನಾ ಸಭೆ

ಮೈಸೂರು: ನ.1ರಿಂದ ಆರಂಭವಾಗಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಸಂಬಂಧ ಮೈಸೂರಿನಲ್ಲಿ ಇಂದು ಮತ್ತು ನಾಳೆ ಸಮಾಲೋಚನಾ ಸಭೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಾರ್ಯಾಗಾರ ಕುರಿತಂತೆ ಮಾಹಿತಿ ನೀಡಿರುವ ಅವರು ನಮ್ಮ ಪಕ್ಷದ ನಾಯಕರಿಗೆ ಮುಂದಿನ ಕಾರ್ಯತಂತ್ರದ ಬಗ್ಗೆ ಸ್ಪಷ್ಟ ದಿಕ್ಸೂಚಿ ನೀಡಲಾಗುವುದು. ಕಾರ್ಯಾಗಾರದಲ್ಲಿ ಮಾಜಿ ಪ್ರಧಾನಮಂತ್ರಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಷೆಂಪೂರ್, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಂಬರುವ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿದಂತೆ ಆಯ್ದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ನವೆಂಬರ್ 1 ರಿಂದ ಪಂಚರತ್ನ ರಥಯಾತ್ರೆ ಅರಂಭವಾಗುತ್ತಿದ್ದು, ಶಿಕ್ಷಣ, ಆರೋಗ್ಯ, ಯುವ ಮತ್ತು ಮಹಿಳಾ ಸಬಲೀಕರಣ, ಕೃಷಿ – ನೀರಾವರಿ, ಉದ್ಯೋಗ, ವಸತಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡುವ ಬಗ್ಗೆ ಸಭೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದ್ದಾರೆ.

ಪಕ್ಷವು ಬೇರೆಯದೇ ದಿಕ್ಕಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಹೊರತಾದ ಜನಪರ ದಾರಿಯಲ್ಲಿ ಪ್ರಯಾಣ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತದಿಂದ ರೋಸಿ ಹೋಗಿರುವ ಜನರಿಗೆ ಜನಪರ ಸರಕಾರ ನೀಡಬೇಕು ಉದ್ದೇಶದಿಂದಲೇ ಪಕ್ಷವು ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಮೈಸೂರಿನ ಸಭೆ ನಿರ್ಣಾಯಕ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.


Spread the love